ಪಾಕಿಸ್ತಾನದ ಬಗ್ಗು ಬಡಿದ ಭಾರತ ; ಮಿಂಚಿದ ಬುಮ್ರಾ
ಬೆಂಗಳೂರು : ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ
ಟಿ T20 ವಿಶ್ವಕಪ್ ಪಂದ್ಯದಲ್ಲಿ ಭಾರತ ಐತಿಹಾಸಿಕ ಗೆಲುವು ಸಾಧಿಸಿದ್ದು ಮತ್ತೊಮ್ಮೆ ಪಾಕಿಸ್ತಾನವನ್ನು ಬಗ್ಗು ಬಡಿಯುವಲ್ಲಿ ರೋಹಿತ್ ಪಡೆ ಯಶಸ್ವಿಯಾಗಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಆಡಲು ಬಂದ ಭಾರತ ತಂಡ 19 ನೇ ಒವರ್ ನಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು ಕೇವಲ 119 ರನ್ ಗುರಿ ನೀಡಿತ್ತು. ಸುಲಭ ಗುರಿ ಬೆನ್ನಟ್ಟಿದ ಪಾಕಿಸ್ತಾನ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 113 ರನ್ ಗಳಿಸಿ ಸೋಲಪ್ಪಿತು.
ಭಾರತದ ಪರ ರಿಷಬ್ ಪಂತ್ 31 ಎಸೆತದಲ್ಲಿ 42 ರನ್ ಗಳಿಸಿದರು ಉಳಿದ ಆಟಗಾರರು ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾದರು. ಆದರೆ ಬೌಲಿಂಗ್ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ವಿಶ್ವಶ್ರೇಷ್ಠ ಬೌಲರ್ ಬುಮ್ರಾ ಅವರ ಮಾರಕ ದಾಳಿಗೆ ಪಾಕಿಸ್ತಾನ ಸೋತು ಸುಣ್ಣವಾಗಿದೆ.
ಅದ್ಬುತ ಬೌಲಿಂಗ್ ದಾಳಿ ನಡೆಸಿದ ಬುಮ್ರಾ 4 ಒವರ್ ನಲ್ಲಿ ಕೇವಲ 14 ರನ್ ನೀಡಿ 3 ವಿಕೆಟ್ ಪಡೆದರು. ಇನ್ನು ಹಾರ್ದಿಕ್ ಪಾಂಡ್ಯ 4 ಒವರ್ ನಲ್ಲಿ 24 ರನ್ ನೀಡಿ 2 ವಿಕೆಟ್ ಪಡೆದು ಮಿಂಚಿದರು.