
ಕ್ರಿಕೆಟ್ : ಪಾಕಿಸ್ತಾನದ ಗೆಲುವಿಗೆ ಸಂಭ್ರಮಾಚರಣೆ : ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲು

ಶ್ರೀನಗರ : ಭಾರತ ಹಾಗೂ ಪಾಕಿಸ್ತಾನದ ವಿರುದ್ಧ ನಡೆದಿದ್ದ ಟಿ – 20 ವಿಶ್ವಕಪ್ ಟೂರ್ನಿಯ ನಂತರ ಪಾಕಿಸ್ತಾನ ಗೆದ್ದಿರುವುದಕ್ಕೆ ಸಂಭ್ರಮಾಚರಣೆ ಮಾಡಿದ್ದ ಶ್ರೀನಗರ ಕಾಲೇಜು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸಂಭ್ರಮಾಚರಣೆ ಮಾಡಿದ್ದ ವೀಡಿಯೋ ನೋಡಲು ಕೆಳಗಿನ ಲಿಂಕ್ ಒತ್ತಿ…!
https://twitter.com/drmonika_langeh/status/1452344747272511488?t=kE6_foZ9kfXW6Ftoq-qlhg&s=19
ಪಾಕ್ ಗೆಲುವಿಗೆ ಸಂಭ್ರಮಾಚರಣೆ ಮಾಡಿದ್ದ ಶ್ರೀನಗರದ ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಅಡಿಯಲ್ಲಿ ಎರಡು ಭಯೋತ್ಪಾದನಾ ವಿರೋಧಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ಶ್ರೀನಗರ ವೈದ್ಯಕೀಯ ಕಾಲೇಜು ಹಾಗೂ ಶೆರೆ ಕಾಶ್ಮೀರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸ್ಕಿಮ್ಸ್) ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳು ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ್ದಲ್ಲದೆ, ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗುವುದು ವಿಡಿಯೋದಲ್ಲಿ ದಾಖಲಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.