ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ
ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ಒಬ್ಬರು ಯುವಕರ ಮೇಲೆ ಹದಿನೈದಕ್ಕೂ ಅಧಿಕ ಜನರಿದ್ದ ಗುಂಪು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಕಿತ್ತೂರು ಪಟ್ಟಣದಲ್ಲಿ ನಡೆದಿದೆ.
ಕಿತ್ತೂರು ಪಟ್ಟಣದ ಮುಜಮಿಲ್ ಜಮಾದಾರ್ ಹಾಗೂ ತೌಸಿಫ್ ಜಮಾದಾರ್ ಎಂಬ ಇಬ್ಬರು ಯುವರನ್ನು ಹದಿನೈದಕ್ಕೂ ಅಧಿಕ ಜನರಿದ್ದ ಗುಂಪು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ದಾಳಿ ಮಾಡಿರುವ ಗುಂಪು ನೆಸರಗಿ ಮೂಲದವರು ಎಂದು ಹೇಳಲಾಗುತ್ತಿದ್ದು, ಘಟನೆಗೆ ಹಣಕಾಸಿನ ವ್ಯವಹಾರ ಕಾರಣ ಎಂದು ಹೇಳಲಾಗುತ್ತಿದೆ. ತೀವ್ರವಾಗಿ ಗಾಯಗೊಂಡ ಮುಜಮಿಲ್ ಜಮಾದಾರ್ ಎಂಬಾತತನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


