ಗಿಡಗಾನಹಳ್ಳಿ ಗ್ರಾಮದ ನಿವಾಸಿ ಪವಿತ್ರ (35) ಕೊಲೆಯಾದ ದುರ್ದೈವಿ ಮಹಿಳೆ. ಪತ್ನಿಯನ್ನೇ ಹತ್ಯೆಗೈದ ಪಾಪಿ ಪತಿಯನ್ನು ವೆಂಕಟೇಶ್ ಎಂದು ಗುರುತಿಸಲಾಗಿದೆ.
ಚಿಕ್ಕಬಳ್ಳಾಪುರ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯ ಕುತ್ತಿಗೆಗೆ ವೈರ್ ಬಿಗಿದು ಕೊಲೆ (Murder Case) ಮಾಡಿ, ಮೂವರು ಮಕ್ಕಳನ್ನು ಬಿಟ್ಟು ಪರಾರಿಯಾಗಿದ್ದಾನೆ. ಈ ಘಟನೆ ಚಿಕ್ಕಬಳ್ಳಾಪುರದ (Chikkaballapur) ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗಿಡಗಾನಹಳ್ಳಿ ಗ್ರಾಮದ ನಿವಾಸಿ ಪವಿತ್ರ (35) ಕೊಲೆಯಾದ ದುರ್ದೈವಿ ಮಹಿಳೆ. ಪತ್ನಿಯನ್ನೇ ಹತ್ಯೆಗೈದ ಪಾಪಿ ಪತಿಯನ್ನು ವೆಂಕಟೇಶ್ ಎಂದು ಗುರುತಿಸಲಾಗಿದೆ. ಕೊಲೆಯಾದ ಪವಿತ್ರ ಹಾಗೂ ಆರೋಪಿ ವೆಂಕಟೇಶ್ಗೆ ಮದುವೆಯಾಗಿ 15 ವರ್ಷಗಳಾಗಿದ್ದವು. ಈ ದಂಪತಿಗೆ ಮೂವರು ಮಕ್ಕಳಿದ್ದಾರೆ. ಆದರೆ, ಆರೋಪಿ ವೆಂಕಟೇಶ್ಗೆ ವಿಪರೀತ ಕುಡಿತದ ಚಟವಿತ್ತು ಎನ್ನಲಾಗಿದೆ.
ಕುಡಿತದ ದಾಸನಾಗಿದ್ದ ಈತ ನಿತ್ಯ ಸಿಕ್ಕಸಿಕ್ಕವರ ಬಳಿ ಸಾಕಷ್ಟು ಸಾಲವನ್ನು ಮಾಡಿಕೊಂಡಿದ್ದಲ್ಲದೆ, ಮಾನಸಿಕವಾಗಿ ಮನೆಯಲ್ಲಿ ಸಹ ಒತ್ತೆ ಇಟ್ಟಿದ್ದ ಎನ್ನಲಾಗಿದೆ.
ಇದೇ ವಿಚಾರವಾಗಿ ಗಂಡ-ಹೆಂಡತಿ ನಡುವೆ ಕಲಹ ನಡೆಯುತ್ತಿತ್ತು. ಎಂದಿನಂತೆ ಘಟನೆ ನಡೆದ ದಿನವೂ ಸಹ ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಕೋಪೋದ್ರಿಕ್ತನಾದ ವೆಂಕಟೇಶ್, ಮನೆಯಲ್ಲಿದ್ದ ವೈರ್ನಿಂದ ಪತ್ನಿ ಪವಿತ್ರಳ ಕುತ್ತಿಗೆಗೆ ಬಲವಾಗಿ ಬಿಗಿದು ಕೊಲೆ ಮಾಡಿದ್ದಾನೆ. ಆಕೆ ಸ್ಥಳದಲ್ಲೇ ಸಾವನ್ನಪ್ಪುತ್ತಿದ್ದಂತೆ ಆರೋಪಿ ಅಲ್ಲಿಂದ ಕಾಲ್ಕಿತ್ತಿದ್ದಾನೆ.
ಪತ್ನಿಯ ಬಗೆ ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಕುಶಲ್ ಚೌಕ್ಸೆ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೂವರು ಮಕ್ಕಳನ್ನು ಅನಾಥರನ್ನಾಗಿಸಿ ಪರಾರಿಯಾಗಿರುವ ಹಂತಕ ಪತಿ ವೆಂಕಟೇಶ್ಗಾಗಿ ಪೊಲೀಸರು ಜಾಲ ಬೀಸಿದ್ದಾರೆ.



