BELAGAVI : ರುಂಡವಿಲ್ಲದ ಮೃತದೇಹ ಬಾವಿಯಲ್ಲಿ ಪತ್ತೆ
ಬೆಳಗಾವಿ : ತಾಲೂಕಿನ ಮುತಗಾ ಗ್ರಾಮದ ತಾಪಂ ಮಾಜಿ ಸದಸ್ಯ ಸುನೀಲ ಎಂಬುವರ ಜಮೀನಿನಲ್ಲಿ ಸುಮಾರು 30 ವರ್ಷದ ವ್ಯಕ್ತಿಯ ತಲೆ ಇಲ್ಲದ ಮೃತ ದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಮಾರಿಹಾಳ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.
ಸುಮಾರು 30 ವರ್ಷದ ಯುವಕನನ್ನು ಶಿರಚ್ಛೇದ ಮಾಡಿ ಕೊಲೆಗೈದು ರುಂಡ ಬೇರ್ಪಡಿಸಿ ದೇಹವನ್ನು ದುಷ್ಕರ್ಮಿಗಳು ಬಾವಿಯಲ್ಲಿ ಎಸೆದು ಹೋಗಿದ್ದಾರೆ. ಬೆಳಗ್ಗೆ ಹೊಲಕ್ಕೆ ಹೋದ ಗ್ರಾಮಸ್ಥರು ಇದನ್ನು ಕಂಡು ಆತಂಕಗೊಂಡಿದ್ದಾರೆ.
************************
ಹಿಂದೂ ಧರ್ಮದ ದೇವರ ಪೋಟೋ ಇರುವ ಪೇಪರ್ ಮೇಲೆ ಮಾಂಸ ಮಾರಾಟ : ಆರೋಪಿ ಬಂಧನ
ಉತ್ತರಪ್ರದೇಶ : ಉದ್ದೇಶಪೂರ್ವಕವಾಗಿ ಹಿಂದೂ ಧರ್ಮದ ದೇವರ ಪೋಟೋ ಇರುವ ದಿನಪತ್ರಿಕೆ ಮೇಲೆ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಉತ್ತರಪ್ರದೇಶದ ಪೊಲೀಸರು ಬಂಧಿಸಿದ್ದಾರೆ.
ಧಾರ್ಮಿಕ ಭಾವನೆಗೆ ದಕ್ಕೆ ಉಂಟುಮಾಡಿದ ಹಿನ್ನಲೆಯಲ್ಲಿ ತಾಲಿಬ್ ಹುಸೇನ್ ಎಂಬ ಮಾಂಸ ಮಾರಾಟಗಾರನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಿಂದೂ ದೇವರು ಮತ್ತು ದೇವತೆಯ ಚಿತ್ರವಿರುವ ಕಾಗದದ ಮೇಲೆ ಕೋಳಿ ಮಾಂಸವನ್ನು ಮಾರಾಟ ಮಾಡುತ್ತಿದ್ದಾನೆ ಎಂದು ಕೆಲವರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಆತನನ್ನು ಬಂಧಿಸಲು ಚಿಕನ್ ಶಾಪ್ಗೆ ಪೊಲೀಸರ ತಂಡ ತೆರಳಿದಾಗ ಆತ ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.
ಆರೋಪಿಯನ್ನು ಬಂಧಿಸಿರುವ ಪೊಲೀಸರು ಈತನ ವಿರುದ್ಧ ಐಪಿಸಿ ಸೆಕ್ಷನ್ 153-ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295-ಎ (ಧಾರ್ಮಿಕ ಭಾವನೆಗಳನ್ನು ಅವಮಾನಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯ ಎಸಗುವುದು) ಮತ್ತು 307 (ಕೊಲೆಗೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.