ಬೆಳಗಾವಿ : ನೇಣು ಬಿಗಿದುಕೊಂಡು ಕೆಎಎಸ್ ಅಧಿಕಾರಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.

ಆಜಮ್ ನಗರದ ನಿವಾಸದಲ್ಲಿ ಎಫ್‌ಡಿಎ ಜಾಫರ್ ಫೀರ್ಜಾದೆ(39) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಮಧ್ಯಾಹ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅವರ ಮರಣೋತ್ತರ ಪರೀಕ್ಷೆ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ನಡೆಸಲಾಗುತ್ತಿದೆ‌.

ಡಿಟಿಐ‌ನಲ್ಲಿ ಎಫ್‌ಡಿಎ ತರಬೇತಿಯಲ್ಲಿದ್ದ ಜಾಫರ್ ಫಿರ್ಜಾದೆ  ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾರ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಪತ್ನಿ ರೇಷ್ಮಾ ತಾಳಿಕೋಟಿ ಅವರು ಹಿಡಕಲ್ ಡ್ಯಾಂ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ರೇಷ್ಮಾ ತಾಳಿಕೋಟಿ ಆಗಮನಕ್ಕಾಗಿ ಕಾಯುತ್ತಿರುವ ಕುಟುಂಬಸ್ಥರು. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.