Select Page

Advertisement

ಕ್ಲೈಮ್ಯಾಕ್ಸ್ ಹಂತಕ್ಕೆ ಕುರ್ಚಿ ಕದನ ; ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆ

ಕ್ಲೈಮ್ಯಾಕ್ಸ್ ಹಂತಕ್ಕೆ ಕುರ್ಚಿ ಕದನ ; ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆ





ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ನಡೆಯುತ್ತಿರುವ ಗೊಂದಲಗಳ ಮಧ್ಯೆ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.‌ ಉಪಮುಖ್ಯಮಂತ್ರಿ ಡಿಕೆಶಿ ಹಾಗೂ ಸಹೋದರ ಸುರೇಶ್ ಇಬ್ಬರೂ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ.

ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ತಲುಪಿದ್ದು ಬುಧವಾರ ತಡರಾತ್ರಿ ದೆಹಲಿಯಲ್ಲಿ ಡಿಕೆಶಿ ಹಾಗೂ ಸುರೇಶ್ ಇಬ್ಬರೂ ಹೈಕಮಾಂಡ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ ವೇಣುಗೋಪಾಲ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಸಿಎಂ ಹಾಗೂ ಡಿಸಿಎಂ ನಡುವಿನ ಮುಸುಕಿನ ಗುದ್ದಾಟ ಮುಂದುವರಿದಿದೆ. ಈ ಸಲ ಯಾವುದೇ ಕಾರಣಕ್ಕೂ ಸಿಎಂ ಸ್ಥಾನ ಪಡೆಯಬೇಕು ಎಂಬ ಉತ್ಸಾಹದಲ್ಲಿರುವ ಡಿ.ಕೆ ಶಿವಕುಮಾರ್ ಪ್ರಯತ್ನ ಮುಂದುವರಿಸಿದ್ದಾರೆ.

ಎರಡು ದಿನಗಳಿಂದ ದೆಹಲಿ ಪ್ರವಾಸದಲ್ಲಿರುವ ಡಿ.ಕೆ ಶಿವಕುಮಾರ ಅವರು ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ನಾಯಕರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಬಜೆಟ್ ತಯಾರಿಯಲ್ಲಿದ್ದರೂ ಇದ್ಯಾವುದಕ್ಕೂ ಸೊಪ್ಪು ಹಾಕದ ಡಿಕೆಶಿ ತಮ್ಮ ಇತ್ತಡ ತಂತ್ರ ಮುಂದುವರಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!