ಶುಕ್ರವಾರ ಸರ್ಕಾರಿ ರಜೆ ಘೋಷಣೆ ; ಕಾರ್ಯಕ್ರಮದ ಕುರಿತು ಡಿಸಿಎಂ ಮಹತ್ವ ಮಾಹಿತಿ…!
ಬೆಳಗಾವಿ : ಡಾ. ಮನಮೋಹನ್ ಸಿಂಗ್ ನಿಧನ ಹಿನ್ನಲೆಯಲ್ಲಿ ಶುಕ್ರವಾರ ಬೆಳಗಾವಿಯಲ್ಲಿ ನಡೆಯಬೇಕಿದ್ದ ಗಾಂಧಿ ಭಾರತ ಐತಿಹಾಸಿಕ ಕಾರ್ಯಕ್ರಮ ರದ್ದುಗೊಳಿಸಿಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಗೋಷ್ಠಿ ಉದ್ದೇಶಿಸಿ ಮಾತನಾಡಿದ ಇವರು. ದೇಶ ಕಂಡ ಅಪರೂಪದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಕಳೆದುಕೊಂಡು ನೋವುಂಟಾಗಿದೆ. ಗಾಂಧಿ ಭಾರತ ಕಾರ್ಯಕ್ರಮ ರದ್ದುಪಡಿಸಲಾಗಿದ್ದು, ಮುಖ್ಯ ವೇದಿಕೆಯಲ್ಲಿ ಶುಕ್ರವಾರ ಬೆಳಿಗ್ಗೆ 10 : 30 ಕ್ಕೆ ಶ್ರದ್ಧಾಂಜಲಿ ಸಭೆ ನಡಿಸಿ ಗೌರವ ಸೂಚಿಸಲಾಗುತ್ತಿದ್ದು ಬೆಳಗಾವಿಯಲ್ಲಿ ಉಳಿದುಕೊಂಡ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಬೇಕು ಎಂದರು.
ಕಾಂಗ್ರೆಸ್ ಕಾರ್ಯಕಾರಿ ಸಭೆಗೆ ದೇಶದ ನೂರಾರು ನಾಯಕರು ಬೆಳಗಾವಿಯಲ್ಲಿ ಉಳಿದುಕೊಂಡಿದ್ದು ಇವರಿಗೆ ಯಾವುದೇ ತೊಂದರೆ ಆಗದಂತೆ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಕರ್ತವ್ಯ ನಿಭಾಯಿಸಬೇಕು. ನಾನು ಮತ್ತೆ ಸಿಎಂ ಅವರು ಶುಕ್ರವಾರ ದೆಹಲಿಗೆ ತೆರಳುತ್ತೇವೆ ಎಂದರು.


