
ಕುಂಭಮೇಳಕ್ಕೆ ನಾನು ಹೋಗುತ್ತೇನೆ ; ಡಿ.ಕೆ ಶಿವಕುಮಾರ್

ಬೆಳಗಾವಿ : ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗವಹಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ಭಾನುವಾರ ನಗರದ ಕಪಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಇವರು. ಐತಿಹಾಸಿಕ ಕುಂಭಮೇಳಕ್ಕೆ ಕುಟುಂಬ ಸಮೇತರಾಗಿ ಹೋಗಲಿದ್ದೇನೆ. ಈಗಾಗಲೇ ಯುಪಿಯ ಸಚಿವರು ಆಹ್ವಾನ ನೀಡಿದ್ದಾರೆ. ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದರು.
ಬೆಳಗಾವಿಯ ಐತಿಹಾಸಿಕ ಕಪಿಲೇಶ್ವರ ದೇವಸ್ಥಾನದಲ್ಲಿ ಡಿ.ಕೆ ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದರು. ಶಿವಲಿಂಗಕ್ಕೆ ರುದ್ರಾಭಿಷೇಕ ನೆರವೇರಿಸಿ ನಾಡಿನ ಒಳಿತಿಗೆ ಪ್ರಾರ್ಥನೆ ಸಲ್ಲಿಸಿದ್ದೆನೆ ಎಂದು ಹೇಳಿದರು.