
“ ಶಿವ ” ಪೂಜೆ ; ಶೀಘ್ರ ಸಿಎಂ ಹುದ್ದೆ ಆಶಿರ್ವಾದ…!

ಬೆಳಗಾವಿ : ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿದಂತೆ ಕಾಂಗ್ರೆಸ್ ನಲ್ಲಿ ಉಂಟಾಗಿದ್ದ ಗೊಂದಲಗಳ ಮಧ್ಯೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭಾನುವಾರ ನಗರದ ಕಪಿಲೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರ.
ಬೆಳಗಾವಿಯ ಶಹಾಪುರದಲ್ಲಿರುವ ಐತಿಹಾಸಿಕ ಕಪಿಲೇಶ್ವರ ದೇವಸ್ಥಾನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್
ರುದ್ರಾಭಿಷೇಕ ಸೇರಿದಂತೆ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಶಿವಲಿಂಗಕ್ಕೆ 111 ಲೀಟರ್ ಹಾಲು ಸಮರ್ಪಿಸಿದ ಇವರು ಕೆಲಹೊತ್ತು ರುದ್ರಾಕ್ಷಿ ಧರಿಸಿ ಜಪ ಮಾಡಿದರು.
ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಇವರು. ಪರಮೇಶ್ವರನ ಅವತಾರ ಕಪಿಲೇಶ್ವೇರ. ಈ ಸನ್ನಿಧಿಗೆ ಮಹಾತ್ಮ ಗಾಂಧಿ, ಬಾಲ ಗಂಗಾಧರ ತಿಲಕ್, ಸ್ವಾಮಿ ವಿವೇಕಾನಂದ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದರು ಈ ಹಿನ್ನಲೆಯಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾಗಿ ಹೇಳಿದರು.
ನಾವು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಉಳಿಯಬೇಕು ಎಂದು ಹೋರಾಟ ಮಾಡುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ನಾವು ರುದ್ರೇಶ್ವರನ ಪೂಜೆ ಮಾಡಿದ್ದೇವೆ. ಈ ರಾಜ್ಯದ ಜನರಿಗೆ ಒಳ್ಳೆಯದಾಗಲಿ ಎಂದು ಬೇಡಿಕೊಂಡಿದ್ದೇವೆ. ಕಾರ್ಯಕ್ರಮ ಯಶಸ್ವಿಯಾಗಲಿ, ರಾಜ್ಯಕ್ಕೂ ಒಳ್ಳೆಯದಾಗಲಿ ಎಂದು ಬೇಡಿಕೊಂಡಿದ್ದೇನೆ ಎಂದು ಹೇಳಿದರು.