ಪಾಕ್ ವಿರುದ್ಧ ಕೇಂದ್ರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧ : ಡಿ.ಕೆ ಶಿವಕುಮಾರ್
ಬೆಂಗಳೂರು : ಈಗಾಗಲೇ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಅನೇಕ ನಿರ್ಧಾರ ಕೈಗೊಂಡಿದ್ದು, ಪಾಕಿಸ್ತಾನ ವಿರುದ್ಧ ಕೇಂದ್ರ ಸರಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಭಿಪ್ರಾಯಪಟ್ಟರು.
ಭಾರತ ಹಾಗೂ ಪಾಕಿಸ್ತಾನ ಬಿಕ್ಕಟ್ಟಿನ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಇವರು. ಭಾರತ ಉಳಿಯಬೇಕು ಎಂಬುದು ನಮ್ಮ ನಿಲುವು. ಸಿಎಂ ಸಿದ್ದರಾಮಯ್ಯ ಅವರ ಪಾಕ್ ವಿರುದ್ಧ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಇನ್ನೂ ನಾನು ಶಾಂತಿಪ್ರಿಯ ಪಾಕಿಸ್ತಾನ ವಿರುದ್ಧ ಯುದ್ಧ ಬೇಡ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ಆದರೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ಬೆನ್ನಿಗೆ ನಿಲ್ಲುವ ನಿರ್ಧಾರ ಮಾಡಿದ್ದಾರೆ.


