ಬಿಜೆಪಿಗೆ ರಾಜ್ಯದಲ್ಲಿ ಒಂದೇ ಒಂದು ಸಭೆ ಮಾಡಲು ಬಿಡಲ್ಲ: ಡಿಸಿಎಂ ಎಚ್ಚರಿಕೆ
ಬೆಳಗಾವಿ : ನಮ್ಮ ಪ್ರತಿಭಟನಾ ಕಾರ್ಯಕ್ರಮಕ್ಕೆ ಬಿಜೆಪಿಯು ತಮ್ಮ ಕಾರ್ಯಕರ್ತರನ್ನು ಕಳುಹಿಸಿ ಕಪ್ಪು ಬಾವುಟ ಪ್ರದರ್ಶಿಸಿ ಗದ್ದಲ ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ಬಿಜೆಪಿ ಹಾಗೂ ವಿರೋಧ ಪಕ್ಷದ ನಾಯಕರಿಗೆ ಹೇಳಲು ಬಯಸುತ್ತೇನೆ. ನಿಮ್ಮ ಪ್ರವೃತ್ತಿ ಹೀಗೆ ಮುಂದುವರೆದರೆ ರಾಜ್ಯದಲ್ಲಿ ನೀವು ಒಂದೇ ಒಂದು ಸಭೆ ಮಾಡಲು ನಾವು ಅವಕಾಶ ನೀಡುವುದಿಲ್ಲ. ಇದು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಆಕ್ರೋಶ ಹೊರಹಾಕಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇವರು.
ನಾನು ನಮ್ಮ ಕಾರ್ಯಕರ್ತರಿಗೆ ಸಂದೇಶ ನೀಡುತ್ತೇನೆ. ಪೆಟ್ರೋಲ್, ಡೀಸೆಲ್, ಚಿನ್ನ, ಕಬ್ಬಿಣ, ಸೀಮೆಂಟ್ ಬೆಲೆ ಏರಿಕೆ ಯಾಕೆ ಆಗಿದೆ ಎಂದು ಬಿಜೆಪಿಯವರನ್ನು ಪ್ರಶ್ನಿಸಿ ಎಂದು ಕರೆ ನೀಡಬೇಕಾಗುತ್ತದೆ. ನೀವು ನಮ್ಮ ವಿರುದ್ಧ ಹೋರಾಟ ಮಾಡುವುದಕ್ಕಿಂತ, ನಾವು ನಿಮ್ಮ ವಿರುದ್ಧ ಹೋರಾಟ ಮಾಡಲು ನನಗೆ ಹೆಚ್ಚಿನ ಕಾರ್ಯಕ್ಷಮತೆ ಇದೆ ಎಂದರು.
ಬಿಜೆಪಿ ನಾಯಕರೇ ನೀವು ನಿಮ್ಮ ಕಾರ್ಯಕರ್ತರಿಗೆ ಬುದ್ದಿ ಹೇಳಿ ಸರಿ ಮಾಡಿಕೊಂಡರೆ ಇಲ್ಲವಾದರೆ, ಎಲ್ಲಾ ರೀತಿಯ ಪ್ರತಿ ಹೋರಾಟಕ್ಕೆ ನಾವು ಸಿದ್ಧರಿದ್ದೇವೆ. ಇದು ಮನವಿಯಲ್ಲ ಎಚ್ಚರಿಕೆ” ಎಂದು ಕಿಡಿಕಾರಿದರು.


