ಅಮಾನುಷವಾಗಿ ಸುರೇಶ್ ಅಂಗಡಿ ಅಂತ್ಯಸಂಸ್ಕಾರ, ಬೆಳಗಾವಿ ಜನತೆಗೆ ಬಿಜೆಪಿ ಮಹಾ ದ್ರೋಹ : ಡಿಕೆಶಿ – ಭಾವುಕ
ಬೆಳಗಾವಿ : ಮಾಜಿ ಕೇಂದ್ರ ಸಚಿವ ದಿ. ಸುರೇಶ್ ಅಂಗಡಿ ಸಾವಿನ ವಿಚಾರದಲ್ಲಿ ಕೇಂದ್ರ ಸರ್ಕಾರ ನಡೆದುಕೊಂಡ ರೀತಿ ಅಮಾನುಷವಾಗಿತ್ತು. ಅವರ ಮೃತದೇಹವನ್ನು ತವರಿಗೆ ತರದೆ ಬೆಳಗಾವಿ ಜನತೆಗೆ ಬಿಜೆಪಿ ದ್ರೋಹ ಎಸಗಿದೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ನೋವಿನಿಂದ ನುಡಿದರು.
ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇವರು. ಕೊರೊನಾ ಸಂದರ್ಭದಲ್ಲಿ ಮೃತಪಟ್ಟ ಮಾಜಿ ಕೇಂದ್ರ ಸಚಿವ ದಿ. ಸುರೇಶ್ ಅಂಗಡಿ ಪಾರ್ಥಿವ ಶರಿರವನ್ನು ಬೆಳಗಾವಿಗೆ ತರಬಹುದಿತ್ತು. ಸೈನ್ಯದಿಂದ ವಿಮಾನಯಾನ ವ್ಯವಸ್ಥೆ ಮಾಡಿಕೊಳ್ಳುವ ಅವಕಾಶ ಕೇಂದ್ರ ಸರ್ಕಾರದ ಬಳಿ ಇದ್ದರು ಅತ್ಯಂತ ಅಮಾನುಷವಾಗಿ ಅಂತ್ಯಸಂಸ್ಕಾರ ನಡೆಸಿದೆ. ಈ ವಿಚಾರವನ್ನು ನಾನು ಕಳೆದ ಲೋಕಸಭಾ ಉಪ ಚುನಾವಣೆಯಲ್ಲಿ ಅವರ ಪತ್ನಿಗೆ ನೋವಾಗುತ್ತದೆ ಎಂದು ಪ್ರಸ್ತಾಪ ಮಾಡಿಲ್ಲ. ಆದರೆ ನನ್ನ ಮಿತ್ರ ಸುರೇಶ್ ಅಂಗಡಿ ಅವರ ಸಾವಿನ ಕೊನೆಯ ಘಟನೆ ನನಗೆ ನೋವು ತರಿಸಿದೆ ಎಂದರು.
ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಸರ್ಕಾರಕ್ಕೆ ಕಾಂಗ್ರೆಸ್ ಒತ್ತಾಯ ಮಾಡಿದ ನಂತರ, ಕಾರ್ಮಿಕರಿಗೆ ಕೊವಿಡ್ ನಿಧಿ ಕೊಡಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಇಪ್ಪತ್ತು ಲಕ್ಷ ಕೋಟಿ ಬಿಡುಗಡೆ ಮಾಡಿದ್ದ ಅನುದಾನ ಯಾರಿಗೆಲ್ಲ ತಲುಪಿದೆ ಎಂದು ಸರ್ಕಾರವೇ ಸ್ಪಷ್ಟಪಡಿಸಲಿ. ಬೀದಿ ಬದಿ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಅನುದಾನ ನೀಡಿಲ. ನಾವು ಅಧಿಕಾರಕ್ಕೆ ಬಂದರೆ ಕಾರ್ಮಿಕರಿಗೆ ಐದು ಸಾವಿರ ನೀಡುತ್ತೇವೆ ಎಂದು ಡಿ.ಕೆ ಶಿವಕುಮಾರ್ ಅಭಿಪ್ರಾಯಪಟ್ಟರು.
ನಾನು ಪಕ್ಷದ ಪರವಾಗಿ ಬೆಳಗಾವಿ ಜನತೆಗೆ ಪ್ರಮಾಣ ಮಾಡುತ್ತೇವೆ. ನೀವು ನಮ್ಮನ್ನು ಅಧಿಕಾರಕ್ಕೆ ತಂದರೆ 50 % ಎರಿಗೆ ವಿನಾಯಿತಿ ನೀಡುವ ಕೆಲಸ ಮಾಡುತ್ತೇವೆ. ಬೆಳಗಾವಿ ಅಭಿವೃದ್ಧಿ ಕೆಲಸ ಮಾಡಬೇಕಾದ ಅನಿವಾರ್ಯತೆ ಇದೆ. ಸಾಕಷ್ಟು ಸಂಪನ್ಮೂಲಗಳನ್ನು ಹೊಂದಿರುವ ಜಿಲ್ಲೆಯನ್ನೂ ಬೆಂಗಳೂರಿನ ಜೊತೆ ಸ್ಪರ್ಧೆ ಮಾಡುವಂತೆ ಮಾಡಬೇಕು ಎಂದರು.
ಸ್ಮಾರ್ಟ್ ಸಿಟಿ ಯೋಜನೆ ಮೂಲಕ ಸರ್ಕಾರ ಅಭಿವೃದ್ಧಿ ಹಣವನ್ನು ಲೂಟಿ ಹೊಡೆದಿದ್ದು ಈ ಕುರಿತಾಗಿ ಧ್ವನಿ ಎತ್ತುವ ಕೆಲಸ ಕಾಂಗ್ರೆಸ್ ಮಾಡುತ್ತದೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡುತ್ತೇವೆ ಎಂದು ಡಿ.ಕೆ ಶಿವಕುಮಾರ್ ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಶಾಸಕ ಸತೀಶ್ ಜಾರಕಿಹೊಳಿ, ಎಂ.ಬಿ ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಮಾಹಾಂತೇಶ್ ಕೌಜಲಗಿ, ಮಾಜಿ ಶಾಸಕ ಪಿರೋಜ್ ಸೇಠ್.ಗೋಕಾಕ್ ಕಾಂಗ್ರೆಸ್ ಮುಖಂಡ ಬಾಲಾಜಿ ಸಾವಳಗಿ. ಕಿಸಾನ್ ಕಾಂಗ್ರೆಸ್ ಸಂಚಾಲಕ ರಾಜೇಂದ್ರ ಪಾಟೀಲ್ ಉಪಸ್ಥಿತರಿದ್ದರು.