ಐಎಎಸ್ ಅಧಿಕಾರಿ ಡಿ. ರೂಪಾ ಅವರಿಗೆ ಸಂಕಷ್ಟ ; ಕೋರ್ಟ್ ಮಹತ್ವದ ಆದೇಶ
ಬೆಂಗಳೂರು : ಐಎಎಸ್ ಅಧಿಕಾರಿಗಳ ಭಹಿರಂಗ ಜಗಳ ರಾಜ್ಯದ ಜನರ ಗಮನಸೆಳೆದಿತ್ತು. ಡಿ. ರೂಪಾ ಅವರ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿದ್ದ ಮಾನಹಾನಿ ಪ್ರಕರಣ ರದ್ದು ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣದ ಅರ್ಜಿಯನ್ನು ಹೈಕೋರ್ಟ್ ಸೋಮವಾರ (ಆ.21) ವಿಚಾರಣೆಗೆ ಕೈಗೆತ್ತಿಕೊಂಡಿತ್ತು.
ಆದರೆ ಪ್ರಕರಣ ರದ್ದು ಕೋರಿದ್ದ ಡಿ.ರೂಪಾ ಮೌದ್ಗಿಲ್ ಅರ್ಜಿ ವಜಾಗೊಳಿಸಿದೆ. ಈ ಮೂಲಕ ಹೈಕೋರ್ಟ್ ನಲ್ಲಿ ರೂಪಾ ಮೌದ್ಗಿಲ್ ಗೆ ಹಿನ್ನಡೆ ಉಂಟಾಗಿದ್ದು, ಮತ್ತೆ ಸಂಕಷ್ಟ ಎದುರಾಗಿದೆ. ಮಾನನಷ್ಟ ಮೊಕದ್ದಮೆ ರದ್ದುಪಡಿಸಲು ಹೈಕೋರ್ಟ್ ನಕಾರ ಮಾಡಿದೆ.


