Select Page

ಸೊರಗಿದ ಮುಖ ;‌ ನಟ ದರ್ಶನ್ ಫೋಟೋ ನೋಡಿ‌ ಅಭಿಮಾನಿಗಳಿಗೆ ಶಾಕ್..!

ಸೊರಗಿದ ಮುಖ ;‌ ನಟ ದರ್ಶನ್ ಫೋಟೋ ನೋಡಿ‌ ಅಭಿಮಾನಿಗಳಿಗೆ ಶಾಕ್..!



ಬೆಂಗಳೂರು : ರೇಣುಕಾಸ್ವಾಮಿ‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ಫೋಟೋ ಸಧ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಆತನ ಸೊರಗಿದ ಮುಖ‌ ನೋಡಿ ಅಭಿಮಾನಿಗಳು ಶಾಕ್ ಆಗಿದ್ದಾರೆ.

ನಟ ದರ್ಶನ್ ಗೆ ಜೈಲಿನಲ್ಲಿ ಮೂಲಭೂತ ಸೌಕರ್ಯ ನೀಡಲಾಗುತ್ತಿಲ್ಲ ಎಂದು ಅವರ ಪರ ವಕೀಲರು ಕೋರ್ಟ್ ಮೆಟ್ಟಿಲು ಹತ್ತಿದ್ದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಒಂದು ವರ್ಷದೊಳಗೆ ವಿಚಾರಣೆ ನಡೆಸುವಂತೆ ತೀರ್ಪು ನೀಡಿದೆ.

ಈ ಹಿಂದೆ ನಟ ದರ್ಶನ್ ಜೈಲಿನಲ್ಲಿ ಐಷಾರಾಮಿ ಬದುಕು ಸಾಗಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಕೈಯಲ್ಲಿ ಚಹಾ ಹಾಗೂ ಸಿಗರೆಟ್ ಹಿಡಿದ ಫೋಟೋ ವೈರಲ್ ಆದ ಬೆನ್ನಲ್ಲೇ ಇವರನ್ನು ಬೆಂಗಳೂರಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು.

Advertisement

Leave a reply

Your email address will not be published. Required fields are marked *

error: Content is protected !!