
ಬಿಜೆಪಿ ಸೇರುತ್ತಾರಾ ನಟ ದರ್ಶನ್, ಸುದೀಪ್ : ಕುತೂಹಲ ಮೂಡಿಸಿದ ಸಿಎಂ ಸುದ್ದಿಘೋಷ್ಠಿ

ಬೆಳಗಾವಿ : ಕನ್ನಡದ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಯಾಗುತ್ತಾರಾ ಎಂಬ ಕುತೂಹಲ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.
ಈ ಕುರಿತು ಇಬ್ಬರು ನಟರು ಅಧಿಕೃತವಾಗಿ ಹೇಳಿಕೊಂಡಿಲ್ಲ. ಆದರೆ ಬಿಜೆಪಿಯ ಕೆಲವು ಮೂಲಗಳ ಪ್ರಕಾರ ನಟ ದರ್ಶನ್ ಹಾಗೂ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ಅಥವಾ ಬೆಂಬಲ ಸೂಚಿಸುವ ಸಾಧ್ಯತೆ ದಟ್ಟವಾಗಿದೆ.
ಇಂದು ಮಧ್ಯಾಹ್ನ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಘೋಷ್ಠಿ ನಡೆಸಲಿದ್ದು ಈ ಸಂದರ್ಭದಲ್ಲಿ ನಟ ಕಿಚ್ಚ ಸುದೀಪ್ ಕೂಡ ಭಾಗಿ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಜಿತೆಗೆ ನಟ ದರ್ಶನ್ ಜೊತೆ ಬಿಜೆಪಿ ಮುಖಂಡರು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಇನ್ನೂ ನಟ ದರ್ಶನ್ ಬಿಜೆಪಿ ಸೇರ್ಪಡೆ ಹಿಂದೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಪ್ರಯತ್ನ ಇದೆ ಎಂದು ಹೇಳಲಾಗುತ್ತುದೆ. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಯಶ್ ಹಾಗೂ ಸುದೀಪ್ ಜೊತೆಗೂಡಿ ಸುಮಲತಾ ಅಂಬರೀಶ್ ಅವರನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದರು. ಈ ಎಲ್ಲಾ ಕಾರಣಗಳಿಂದ ಖ್ಯಾತ ನಟರ ಪಕ್ಷ ಸೇರ್ಪಡೆ ಬಿಜೆಪಿ ವಲಯದಲ್ಲಿ ಸಂಚಲನ ಹುಟ್ಟುಹಾಕಿದ್ದು ಸುಳ್ಳಲ್ಲ.