
ಪತ್ನಿಯನ್ನು ತಬ್ಬಿ ಕಣ್ಣೀರು ಹಾಕಿದ ನಟ ದರ್ಶನ್

ಬೆಂಗಳೂರು : ಚಿತ್ರದುರ್ಗ ರೇಣುಕಾ ಸ್ವಾಮಿ ಹತ್ಯೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಮಗ ಹಾಗೂ ಪತ್ನಿಯನ್ನು ತಬ್ಬಿ ಕಣ್ಣೀರು ಹಾಕಿರುವ ಘಟನೆ ನಡೆದಿದೆ.
ಪರಪ್ಪಣ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗ್ಯಾಂಗ್ ಬಂಧಿಯಾಗಿದ್ದಾರೆ. ನಿನ್ನೆಯಷ್ಟೇ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ಭೇಟಿಗೆ ಬಂದಿದ್ದರು. ಜೈಲು ಸೇರಿದ ನಂತರ ಮೊದಲ ಭೇಟಿಗೆ ಬಂದ ಇಬ್ಬರನ್ನೂ ತಬ್ಬಿ ದರ್ಶನ್ ಕಣ್ಣೀರು ಹಾಕಿದ್ದಾರೆ.
ಈ ಹಿಂದೆ ವಿಜಯಲಕ್ಷ್ಮಿ ಮೇಲೆ ಹಲ್ಲೆ ಆರೋಪದಲ್ಲಿ ನಟ ದರ್ಶನ್ ಜೈಲುವಾಸ ಅನುಭವಿಸಿದ್ದರು. ಆದರೆ ಈ ಬಾರಿ ಪವಿತ್ರ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಮಾಡಿದ ಆರೋಪದಲ್ಲಿ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ ಜೈಲುವಾಸ ಅನುಭವಿಸುತ್ತಿದ್ದಾರೆ.