Breaking : ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಡವಳೇಶ್ವರ
ಬೆಳಗಾವಿ : ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆ ಕೇಲವೇ ಗಂಟೆಯಲ್ಲಿ ನಡೆಯುತ್ತಿರುವ ಬೆನ್ನಲ್ಲೇ ಉಪಾಧ್ಯಕ್ಷ ಸ್ಥಾನಕ್ಕೆ ಸುಭಾಷ್ ಢವಳೇಶ್ವರ ರಾಜೀನಾಮೆ ನೀಡಿದ್ದು ಅಚ್ಚರಿಗೆ ಕಾರಣವಾಗಿದೆ.
ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇಂದು ನಡೆಯುತ್ತಿರುವ ಅಧ್ಯಕ್ಷ ಚುನಾವಣೆಗೂ ಮುನ್ನವೇ ಸುಭಾಷ್ ಢವಳೇಶ್ವರ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅಧ್ಯಕ್ಷ ಸ್ಥಾನದ ಅಲಂಕರಿಸುವ ಲಕ್ಷಣ ಗೋಚರವಾಗುತ್ತಿದೆ.
ಏಕಾಏಕಿ ಉಪಾಧ್ಯಕ್ಷ ಸ್ಥಾನಕ್ಕೆ ಬಾಲಚಂದ್ರ ಜಾರಕಿಹೊಳಿ ಆಪ್ತ ರಾಜೀನಾಮೆ ನೀಡಿ ಅಧ್ಯಕ್ಷ ಸ್ಥಾನದ ಮೇಲೆ ಸದ್ದಿಲ್ಲದೇ ಕಣ್ಣಿಟ್ಟಿರುವ ಸುಭಾಷ್ ಡವಳೇಶ್ವರ. ಈ ಕಾರಣಕ್ಕೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರಾ ಎನ್ನುವ ಪ್ರಶ್ನೆಗೆ ಕೆಲವೇ ಗಂಟೆಯಲ್ಲಿ ಸ್ಪಷ್ಟನೆ ಸಿಗಲಿದೆ.ಬೆಳಗಾವಿ ಡಿಸಿಸಿ ಬ್ಯಾಂಕ್ ಮುಖ್ಯ ವ್ಯವಸ್ಥಾಪಕರಿಗೆ ಸುಭಾಷ್ ಡವಳೇಶ್ವರ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

