ಕುತೂಹಲ ಮೂಡಿಸಿದ ಸ್ಪರ್ಧೆಗಳು ; ನಾಳೆ ಕಾದಿದೆ ಅಚ್ಚರಿ…!
ಬೆಳಗಾವಿ : ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದ ಚುನಾವಣೆ ಕುತೂಹಲ ಕೇಂದ್ರವಾಗಿ ಮಾರ್ಪಾಡಾಗಿದೆ. ಈಗಾಗಲೇ ಜಿಲ್ಲೆ ಸಾಕಷ್ಟು ನಾಯಕರು ನಾಮಪತ್ರ ಸಲ್ಲಿಕೆ ಮಾಡಿದ್ದು ನಾಳೆ ನಾಮಪತ್ರ ಸಲ್ಲಿಕೆ ಕೊನೆಯ ದಿನವಾದ ಹಿನ್ನಲೆಯಲ್ಲಿ ಇನ್ನೂ ಅಚ್ಚರಿಯ ಅಭ್ಯರ್ಥಿಗಳು ಕಣಕ್ಕಿಳಿಯುವ ಸಾಧ್ಯತೆ ಇದೆ.
ಹೌದು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಕಣಕ್ಕಿಳಿಯುವುದು ಬಹುತೇಕ ಫಿಕ್ಸ್ ಎಂದು ಹೇಳಲಾಗುತ್ತಿದೆ.
ಇನ್ನು ಅಚ್ಚರಿ ಬೆಳವಣಿಗೆ ಎಂಬಂತೆ ಡಿಸಿಸಿ ಕಣದಿಂದ ಹಿಂದೆ ಸರಿದಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಇತರೆ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಅಷ್ಟೇ ಅಲ್ಲದೆ ನಾಳೆ ನಾಮಪತ್ರ ಸಲ್ಲಿಕೆ ಕೊನೆ ದಿನವಾದ ಹಿನ್ನಲೆಯಲ್ಲಿ ಇನ್ನೂ ಅನೇಕ ಅಚ್ಚರಿ ಅಭ್ಯರ್ಥಿಗಳು ಕಣಕ್ಕಿಳಿಸುವ ಸಾಧ್ಯತೆ ದಟ್ಟವಾಗಿದೆ. ಜೊತೆಗೆ ಕುತೂಹಲ ಮೂಡಿಸಿದೆ.


