ಯರಗಟ್ಟಿ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಓರ್ವ ಮೃತಪಟ್ಟ ಘಟನೆ ನಂತರ ಸಧ್ಯ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದ್ದು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದ ಗೌಡಪ್ಪಗೌಡ ಮಾಲಿಪಾಟೀಲ (25) ಎಂಬುವರು ಸಾವನಪ್ಪಿದ್ದು, ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.

ವೇಗವಾಗಿ ಬಂದ ಕಾರು ಡಿಕ್ಕಿಯಾದ ಪರಿಣಾಮ ಗೂಡ್ಸ್ ಲಾರಿ ಹಿಂಬದಿ ಹಗ್ಗ ಕಟ್ಟುತ್ತಿದ್ದ ಲಾರಿ ಚಾಲಕ, ರಾಮದುರ್ಗ ತಾಲೂಕಿನ‌ ಹುಲಕುಂದ ಗ್ರಾಮದ ರಂಗಪ್ಪ ಗುರುಸಿದ್ದಪ್ಪ ಪಾಟೀಲ (30) ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಗೌಡಪ್ಪಗೌಡ ಮಾಲಿಪಾಟೀಲ (25) ಎಂಬುವವರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

ಯರಗಟ್ಟಿಯ ಭೀರೇಶ್ವರ ಬ್ಯಾಂಕ್ ಎದುರಿನ ರಸ್ತೆ ಪಕ್ಕ ನಿಂತಿದ್ದ ಲಾರಿಗೆ ಬೆಳಗಾವಿಗೆ ಹೊರಟ್ಟಿದ್ದ ಕಾರು ವೇಗವಾಗಿ ಗುದ್ದಿದೆ. ಈ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದ. ಇನ್ನೂ ಕಾರಿನಲ್ಲಿದ್ದ ಅಮರೆಗೌಡ ಮಾಲಿಪಾಟೀಲ (58) ತೀವ್ರವಾಗಿ ಗಾಯಗೊಂಡಿದ್ದು, ವೀರಭದ್ರಗೌಡ ಡಬಿ (32), ಹನುಮಂತ ಬೆಟಗೇರಿ (23) ಸಣ್ಣಪುಟ್ಟ ಗಾಯಗಳಾಗಿವೆ. ಇವರೆಲ್ಲ ರಾಯಚೂರ ಜಿಲ್ಲೆಯ ಸಿಂಧನೂರು ಪಟ್ಟಣದವರಾಗಿದ್ದಾರೆ.