
ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ಹೃದಯಾಘಾತದಿಂದ ನಿಧನ

ಬೆಂಗಳೂರು : ಹಿರಿಯ ಪತ್ರಕರ್ತ ಹಾಗೂ ಮುಖ್ಯಮಂತ್ರಿಗಳ ಮದ್ಯಮ ಸಂಯೋಜಕರಾಗಿದ್ದ ಗುರುಲಿಂಗ ಸ್ವಾಮಿ ಹೊಳಿಮಠ ಸೋಮವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿವರು ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಅವರ ಮಾಧ್ಯಮ ಸಲಹೆಗಾರರಾಗಿದ್ದ ಇವರು ನಂತರ ಬೊಮ್ಮಾಯಿ ಮುಖ್ಯ ಮುಖ್ಯಮಂತ್ರಿಗಳಾದ ಸಂದರ್ಭದಲ್ಲಿ ಅವರ ಮಾಧ್ಯಮ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅಷ್ಟೇ ಅಲ್ಲದೆ ಕನ್ನಡದ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು.
ಸೋಮವಾರ ಬೆಳಗಿನ ಜಾವ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಂದರ್ಭದಲ್ಲಿ ಗುರುಲಿಂಗ ಸ್ವಾಮಿ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ನಾಗರಭಾವಿಯ ಯುನಿಟಿ ಲೈಫ್ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೂಲತಃ ಗುರುಲಿಂಗಸ್ವಾಮಿ ಅವರು ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನವರು. ಸರಳ ಹಾಗೂ ಸೌಮ್ಯ ಸ್ವಭಾವದವರಾಗಿದ್ದ ಇವರು ಅಗಲಿಗೆ ಬಂದು ವರ್ಗದಲ್ಲಿ ಹಾಗೂ ಪತ್ರಕರ್ತರಿಗೆ ತುಂಬಾ ನೋವು ತರಿಸಿದೆ.