ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿನಿ ದೀಪಾಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ
ಗೋಕಾಕ್ : ಕಳೆದ ಜುಲೈ ನಲ್ಲಿ ಮಡೆದ ನೀಟ್ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು ತಾಲೂಕಿನ ನಲ್ಲಾನಟ್ಟಿ ಗ್ರಾಮದ ಯುವತಿ ದೀಪಾ ಕುಳ್ಳೂರು ಉತ್ತಮ ಸಾಧನೆಗೈದಿದ್ದಾಳೆ.
665 ಅಂಕ ಪಡೆದು ಉತ್ತಮ ಸಾಧನೆ ತೋರಿರುವ ದೀಪಾ ಗೋಕಾಕ್ ತಾಲೂಕಿನ ನಲ್ಲಾನಟ್ಟಿ ಗ್ರಾಮದ ಕೆ.ವೈ. ಕುಳ್ಳೂರ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿನಿಕೂಡಾ ಹೌದು. ದೀಪಾ ಕುಳ್ಳೂರ ಸಾಧನೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಕ್ಷೇತ್ರ ಶಿಕ್ಣಣಾಧಿಕಾರಿ ಅಜೀತ ಮನ್ನಿಕೇರಿ, ನಿವೃತ್ತ ಶಿಕ್ಷಕ ಕೆ.ವೈ.ಕುಳ್ಳೂರ ಸೇರಿದಂತೆ ಗ್ರಾಮದ ಹಲವು ಗಣ್ಯರು ಅಭಿನಂದಿಸಿದ್ದಾರೆ.
ವಿದ್ಯಾರ್ಥಿನಿ ದೀಪಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಾಜಶೇಖರ ಕುಳ್ಳೂರ ಅವರ ಪುತ್ರಿ.