Select Page

ಗ್ರಾಮ ಪಂಚಾಯತಿ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿ.‌ 19 ಕ್ಕೆ ಬೃಹತ್ ಪ್ರತಿಭಟನೆ – ಡಾ. ದೇವಿ ಪ್ರಸಾದ್ ಬೊಲ್ಮ

ಗ್ರಾಮ ಪಂಚಾಯತಿ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿ.‌ 19 ಕ್ಕೆ ಬೃಹತ್ ಪ್ರತಿಭಟನೆ – ಡಾ. ದೇವಿ ಪ್ರಸಾದ್ ಬೊಲ್ಮ

ಬೆಳಗಾವಿ : ರಾಜ್ಯ ಗ್ರಾಮ ಪಂಚಾಯತಿ ನೌಕರರನ್ನು ಸಿ ಮತ್ತು ಡಿ ದರ್ಜೆಗೇರಿಸಬೇಕು ಹಾಗೂ ನೌಕರರ ವಿವಿಧ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ
ಡಿ. 19 ರಿಂದ ಅನಿರ್ಧಿಷ್ಟಾವಧಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಶೇಯೋಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಡಾ. ದೇವಿಪ್ರಸಾದ ಬೊಲ್ಮ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಪಂ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕ್ಲಾರ್ಕ್, ಕ್ಲರ್ಕ್ ಕಮ್ ಡಿಇಒ, ಬಿಲ್ ಕಲೆಕ್ಟರ್ ಹಾಗೂ ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ಸಿ ದರ್ಜೆಗೆ ಮೇಲ್ದರ್ಜೆಗೆರಿಸಬೇಕು. ಮತ್ತು ಅಟೆಂಡರ, ಕ್ಲೀನರ್, ವಾಟರ್ ಮ್ಯಾನ್ ಇತ್ಯಾದಿ ವೃಂದದವರಿಗೆ ಡಿ ದರ್ಜೆಗೆ ಮೇಲ್ದರ್ಜೆಗೇರಿಸಬೇಕು.

ನಗರ ಮತ್ತು ಪಟ್ಟಣ ಪಂಚಾಯತಿ ಮಾದರಿಯಲ್ಲಿ ವೇತನ ಶ್ರೇಣಿ ನಿಗದಿಪಡಿಸಬೇಕು. ಜತೆಗೆ ನೌಕರರು ಮತ್ತು ನೌಕರರ ಅವಲಂಬಿತರಿಗೆ ಆರೋಗ್ಯ ಭದ್ರತೆಯೊಂದಿಗೆ ನಿವೃತ್ತಿ ಜೀವನಕ್ಕೆ ಆರ್ಥಿಕ ಭದ್ರತೆ ವ್ಯವಸ್ಥೆ ಕಲ್ಪಿಸಬೇಕು. ಅಲ್ಲದೇ ವಾಟರ್ ಮ್ಯಾನ, ಶುಚಿತ್ವ ನೌಕರರು ಹಾಗು ಇತರ ನೌಕರರಿಗೆ ಅವರ ವಿದ್ಯಾರ್ಹತೆ ಮತ್ತು ವಯೋಮೀತಿಯನ್ನು ಪರಿಗಣಿಸದೇ ಹಾಗೂ ಪಂಚಾಯತಿಗಳಲ್ಲಿ ಹುದ್ದೆಗಳ ಗರಿಷ್ಠ ಮೀತಿ ಮತ್ತು ಯಾವುದೇ ಕಾಲಮೀತಿಯನ್ನು ನಿಗದಿಪಡಿಸದೇ ಜಿಲ್ಲಾ ಪಂಚಾಯತನಿಂದ ಅನುಮೋದನೆ ನೀಡಬೇಕು.

ಜತೆಗೆ ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ಜಿಲ್ಲಾ ಪಂಚಾಯತಿ ಅನುಮೋದನೆ ನೀಡಿ ಸೇವಾ ಭದ್ರತೆ ಕಲ್ಪಿಸುವುದು ಸೇರಿದಂತೆ ಇನ್ನೀತರ ಬೇಡಿಕೆಗಳನ್ನೂ ಈಡೇರಿಸುವಂತೆ ಹಲವು ಬಾರಿ ಸರ್ಕಾರ ಮತ್ತು ಸಂಬಂಧಿಸಿದ ಇಲಾಖೆಗೆ ಮನವಿ ಸಲ್ಲಿಸುವ ಮೂಲಕ ಗಮನಕ್ಕೆ ತರಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ಡಿ.19 ರಿಂದ ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಸಮಯದಲ್ಲಿ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಸುಮಾರು 10 ಸಾವಿರಕ್ಕೂ ಅಧಿಕಾರಿ ಸಿಬ್ಬಂದಿಯಿಂದ ನೇತೃತ್ವದಲ್ಲಿ ಸುವರ್ಣ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಈ ಸುದ್ದಿಗೋಷ್ಠಿಯಲ್ಲಿ ಪದ್ಮನಾಭ ಆರ್. ಕುಲಾಲ್, ಹೇಮಚಂದ್ರ ನಂದಳಕಿ, ರುಕೇಶ್ ಕಲ್ಮಂಜ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!