ಶತಾಯುಷಿ ಗಂಗಮ್ಮ ಶರಣಯ್ಯ ಹಿರೇಮಠ ನಿಧನ
ಸವದತ್ತಿ : ತಾಲೂಕಿನ ಮಳಗಲಿ ಗ್ರಾಮದ ಶತಾಯುಷಿ ಗಂಗಮ್ಮ ಶರಣಯ್ಯ ಹಿರೇಮಠ (103) ಗುರುವಾರ ನಿಧನರಾದರು.
ಕಳೆದೊಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದ್ದಾರೆ.
ಮೃತರಿಗೆ ಆರು ಗಂಡು ಮಕ್ಕಳು ನಾಲ್ಕು ಹೆಣ್ಣು ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕಳು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ. ವೀರಶೈವ ಧರ್ಮದ ಪ್ರಕಾರ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೆರಿಸಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.