
ಅಮೇರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ; ಆರೋಪಿಯನ್ನು ಹೊಡೆದುರುಳಿಸಿದ ಪೊಲೀಸ್ ಪಡೆ

ನವದೆಹಲಿ : ಅಮೇರಿಕಾದ ಮಾಜಿ ಅಧ್ಯಕ್ಷ ಹಾಗೂ ಈ ಬಾರಿಯ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಪ್ರಚಾರದ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದ್ದು ಇವರಿಕೆ ಕಿವಿ ಭಾಗದಲ್ಲಿ ಗಾಯವಾಗಿವೆ.
ಘಟನೆಯಲ್ಲಿ ಬಂದೂಕುಧಾರಿ ಹಾಗೂ ದಾರಿಹೋಕ ಒಬ್ಬರು ಮೃತಪಟ್ಟಿದ್ದು ಸಭೆಗೆ ಬಂದಿದ್ದ ಪ್ರೇಕ್ಷಕರಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಟ್ರಂಪ್ ಮೇಲೆ ದಾಳಿ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟ್ರಂಪ್ ಮೇಲಿನ ಗುಂಡಿನ ದಾಳಿಯನ್ನು ಅಮೇರಿಕಾ ಅಧ್ಯಕ್ಷ ಬೈಡನ್ ಖಂಡಿಸಿದ್ದಾರೆ. ನಾನು ಆರೋಗ್ಯವಾಗಿದ್ದೇನೆ ಎಂದು ಡೊನಾಲ್ಡ್ ಟ್ರಂಪ್ ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ.