ಕಲಬುರಗಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಲಿಂಗೈಕ್ಯ
ಕಲಬುರಗಿ : ಶರಣಬಸವೇಶ್ವರ ಮಹಾದಾಸೋಹ ಪೀಠದ 8ನೇ ಪೀಠಾಧಿಪತಿ, ವಿದ್ಯಾಭಂಡಾರಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ (89) ಶಿವೈಕ್ಯರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಜು.25ರಂದು ರಾತ್ರಿ ಉಸಿರಾಟದ ಸೋಂಕಿನ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.
ನಿರಂತರವಾಗಿ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಮಹಾದಾಸೋಹ ಮನೆಯಲ್ಲಿ ಸಕಲ ವೈದ್ಯಕಿಯ ಚಿಕಿತ್ಸಾ ಸೌಲಭ್ಯ ಹೊಂದಿರುವ ವಿಶೇಷ ಕೋಣೆ ಸಿದ್ಧಪಡಿಸಿ, ಗುರುವಾರ ಸಂಜೆ ಆಸ್ಪತ್ರೆಯಿಂದ ದಾಸೋಹ ಮನೆಗೆ ಸ್ಥಳಾಂತರಿಸಲಾಗಿತ್ತು.
ಅಪ್ಪಾಜಿ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿರುವ ಹಿನ್ನಲೆ ರಾತ್ರೋರಾತ್ರಿ ದಾಸೋಹ ಮಹಾಮನೆಗೆ ಡಾ.ಶರಣಬಸವಪ್ಪ ಅಪ್ಪ ಅವರ ಕುಟುಂಬದ ಸದಸ್ಯರು, ಮಠಾಧೀಶರು, ಪೊಲೀಸ್ ಅಧಿಕಾರಿಗಳು, ಗಣ್ಯರು, ಅಪ್ಪಾಜಿಯವರ ಸಂಗಡಿಗರು ಹಾಗೂ ವಿದ್ಯಾ ಸಂಸ್ಥೆಯ ಉನ್ನತ ಅಧಿಕಾರಿಗಳು ಆಗಮಿಸಿದರು.


