Select Page

ಖಾನಾಪುರ ಗ್ರಾಮಸ್ಥರ ಸಮಸ್ಯೆಗಳಿಗೆ ಧ್ವನಿಯಾದ ಡಾ.ಸೋನಾಲಿ ಸರ್ನೋಬತ್

ಖಾನಾಪುರ ಗ್ರಾಮಸ್ಥರ ಸಮಸ್ಯೆಗಳಿಗೆ ಧ್ವನಿಯಾದ   ಡಾ.ಸೋನಾಲಿ ಸರ್ನೋಬತ್

ಬೆಳಗಾವಿ : ಖಾನಾಪುರ ತಾಲೂಕಿನ ವಿವಿಧ ಗ್ರಾಮಗಳ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಜಿಲ್ಲೆಯ ಹಿರಿಯ ಅಧಿಕಾರಿಗಳು ಹಾಗೂ ಸಚಿವರಿಗೆ ಬೆಳಗಾವಿ ಬಿಜೆಪಿ ಮಹಿಳಾ ಮೋರಾರ್ಚಾ ಉಪಾಧ್ಯಕ್ಷರೂ, ಖಾನಾಪುರ ತಾಲೂಕು ಉಸ್ತುವಾರಿಗಳಾದ ಡಾ. ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಕಕ್ಕೇರಿಯ ಬಿಷ್ಠಾದೇವಿ ಜಾತ್ರೆಗೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಗೆ ಹಾಗೂ ಜಾತ್ರೆಗೆ ಸೂಕ್ತ ಬಂದೋಬಸ್ತ್ ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೆ ಮನವಿ ಸಲ್ಲಿಸಲಾಯಿತು. ಜಾತ್ರೆಯನ್ನು ಕೋವಿಡ್ ನಿಯಮ ಪಾಲಿಸಿ ನಡೆಸಲು ಅನುಮತಿ ನೂಡುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

ಬೋರುಣಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುರಪುರ, ಕೇರವಾಡ, ಕಲ್ಮೇಶ್ವರ ನಗರ ರಸ್ತೆಗಳನ್ನು ದುರಸ್ತಿ ಮಾಡಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಅವರಿಗೆ ಮನವಿ ಸಲ್ಲಿಸಲಾಯಿತು. ಗಸ್ಟೊಳ್ಳಿ, ಚನಕೆಬೈಲ್ ಗ್ರಾಮಸ್ಥರಿಗೆ ಪಡಿತರ ಚೀಟಿಗಳನ್ನು ನೀಡುವಂತೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳಿಗೆ ಹಾಗೂ  ಮನವಿ ಸಲ್ಲಿಸಲಾಯಿತು.

ಎಲ್ಲ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ಸಿಕ್ಕಿದೆ ಎಂದು ಡಾ.ಸೋನಾಲಿ ಸರ್ನೋಬತ್ ತಿಳಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!