Select Page

Advertisement

ಬಾಂಬ್ ತಯಾರಿಕೆ ; ಡ್ರೋಣ್ ಪ್ರತಾಪ್ ನನ್ನು ಬಂಧಿಸಿದ ಪೊಲೀಸರು

ಬಾಂಬ್ ತಯಾರಿಕೆ ; ಡ್ರೋಣ್ ಪ್ರತಾಪ್ ನನ್ನು ಬಂಧಿಸಿದ ಪೊಲೀಸರು

ಬೆಂಗಳೂರು : ಕೆಮಿಕಲ್ ಬಳಸಿ ಕೆರೆಯಲ್ಲಿ ಬ್ಲಾಸ್ಟ್ ಮಾಡಿದ ಆರೋಪದ ಮೇಲೆ ಮಾಜಿ ಬಿಗ್ ಬಾಸ್ ಸ್ಪರ್ಧಿ ಹಾಗೂ ನಕಲಿ ಡ್ರೋಣ್ ಖ್ಯಾತಿಯ ಪ್ರತಾಪ್ ನನ್ನು ಬಂಧಿಸುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ.

ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿದ್ದರು. ಈ ಸಂಬಂಧ ಇಂದು (ಗುರುವಾರ) ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ಡ್ರೋನ್ ಪ್ರತಾಪ್‌ನನ್ನು ಅರೆಸ್ಟ್ ಮಾಡಿ ಬೆಂಗಳೂರಿಗೆ ಕರೆತರುತ್ತಿದ್ದಾರೆ.

ನೀರಿಗೆ ಕೆಮಿಕಲ್ ಹಾಕಿ ಡ್ರೋನ್ ಪ್ರತಾಪ್ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದಾರೆ. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್ ಆಗಿದೆ. ಬೆಂಕಿ ಸಹ ಚಿಮ್ಮಿದೆ. ಅಷ್ಟೇ ಅಲ್ಲದೇ ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡುಬಂದಿದೆ. ಈ ವೀಡಿಯೋ ನೋಡಿ ಪ್ರತಾಪ್ ಬಿಲ್ಡಪ್ ಬೇರೆ ಕೊಟ್ಟಿದ್ದಾರೆ. ಜೊತೆಗೆ ನಗು-ನಗುತ್ತಲೇ ನೋಡಿ.. ನೋಡಿ ದೊಡ್ಡ ಬ್ಲಾಸ್ಟ್ ಇದು ಎಂದು ಪ್ರತಾಪ್ ಕೂಗಿದ್ದಾರೆ.

ಈ ರೀತಿಯ ಪ್ರಯೋಗ ಅಪಾಯಕಾರಿ ಮತ್ತು ಕಾನೂನು ಬಾಹಿರವಾದದ್ದು. ಈ ಬ್ಲಾಸ್ಟ್ ವಿಡಿಯೋ ಮಾಡುವ ಮುನ್ನ ಕನಿಷ್ಟ ಪಕ್ಷ ಡ್ರೋನ್ ಪ್ರತಾಪ್ ಯೋಚನೆ ಮಾಡಬೇಕಾಗಿತ್ತು ಇದ್ಯಾವ ಸೀಮೆ ವಿಜ್ಞಾನದ ಬಗ್ಗೆ ಮಾಹಿತಿ ಕೊಡ್ತಾ ಇರೋದು ಅವರಿಗೆ ಗೊತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!