
ಪೊಲೀಸ್ ಠಾಣೆಯಲ್ಲಿ ರಾಸಲೀಲೆ ; DYSP ಅಮಾನತು

ಮಧುಗಿರಿ : ದೂರು ನೀಡಲು ಬಂದ ಮಹಿಳೆಯೊಂದಿಗೆ ಡಿವೈಎಸ್ ಪಿ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ವೈರಲ್ ಬೆನ್ನಲ್ಲೇ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪನ್ನು ಅಮಾನತು ಮಾಡಲಾಗಿದೆ.
ಪಾವಗಡದಿಂದ ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಬಂದ ಮಹಿಳೆಯನ್ನು ಡಿವೈಎಸ್ಪಿ ತನ್ನ ಕಚೇರಿಯಲ್ಲಿನ ಶೌಚಾಲಯದಲ್ಲಿ ಕರೆದುಕೊಂಡು ಹೋಗಿದ್ದು ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ.
ಇದನ್ನು ಕೆಲವರು ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ್ದಾರೆ. ಡಿವೈಎಸ್ಪಿ ರಾಮಚಂದ್ರಪ್ಪ ವಿರುದ್ದ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿ ಬಂದಿದ್ದು. ಈ ಪ್ರಕರಣ ಕುರಿತು ಡಿವೈಎಸ್ಪಿ ಯನ್ನು ಅಮಾನತು ಮಾಲಾಗಿದೆ.