
ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ : ಡಿಸಿಗಳಿಗೆ ಆಯೋಗದಿಂದ ಬಂತು ಸೂಚನೆ

ಬೆಳಗಾವಿ : ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಯಾವುದೇ ಕ್ಷಣದಲ್ಲಿ ಪ್ರಕಟವಾಗಲಿದ್ದು ಚುನಾವಣಾ ಮಾದರಿ ನೀತಿ ಸಂಹಿತೆ ಕುರಿತಾಗಿ ಅಗತ್ಯ ಕ್ರಮ ಕೈಗೊಳ್ಳುವಂತಿ ಡಿಸಿಗಳಿಗೆ ಚುನಾವಣಾ ಆಯೋಗ ಮಹತ್ವದ ಸೂಚನೆ ನೀಡಿದೆ.
ಮಾರ್ಚ್ 27 ಅಥವಾ 28ರಂದು ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಎಲ್ಲ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ಜಂಟಿ ಮುಖ್ಯ ಚುನಾವಣಾಧಿಕಾರಿ ಟಿ ಯೋಗೇಶ್, ಕರ್ನಾಟಕ ವಿಧಾನಸಭಾ ಚುನಾವಣೆಗೆ ಏಪ್ರಿಲ್ ಮತ್ತು ಮೇನಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗ ಯಾವುದೇ ಕ್ಷಣದಲ್ಲಿ ವೇಳಾಪಟ್ಟಿಯನ್ನು ಘೋಷಿಸಬಹುದು ಎಂದು ತಿಳಿಸಿದ್ದಾರೆ.
ಚುನಾವಣೆ ಘೋಷಣೆಗೂ ಮುನ್ನವೇ ಹಲವು ಕಾರ್ಯಗಳನ್ನು ನಿರ್ವಹಿಸಬೇಕಿದೆ. ಮಾದರಿ ಚುನಾವಣಾ ನೀತಿ ಸಂಹಿತೆಯಂತೆ ತಕ್ಷಣ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಎಲ್ಲ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚಿಸಿದ್ದಾರೆ. ಮೇ 23ರಂದು ಪ್ರಸ್ತುತ ಸರ್ಕಾರದ ಅವಧಿ ಮುಗಿಯುವುದರಿಂದ ಅದರೊಳಗೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವಂತೆ ಚುನಾವಣೆ ನಡೆಸಬೇಕಾಗಿದ್ದು, ಅದಕ್ಕೆ ಅಗತ್ಯ ಸಿದ್ಧತೆಯನ್ನು ಚುನಾವಣಾ ಆಯೋಗ ನಡೆಸುತ್ತಿದೆ