ಚುನಾವಣಾ ಕಣದಿಂದ ಹಿಂದೆ ಸರಿದ ಲಕ್ಷ್ಮೀ ಮ. ಹೆಬ್ಬಾಳ್ಕರ್
ಬೆಳಗಾವಿ : ಸ್ವಲ್ಪ ಸಮಾಧಾನ ಇವರು ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಲ್ಲ ಕಂಗ್ರಾಳಿಯ ಲಕ್ಷ್ಮೀ ಮ. ಹೆಬ್ಬಾಳ್ಕರ್. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ನಾಮಪತ್ರ ವಾಪಸ್ ಪಡೆದಿದ್ದಾರೆ.
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮತದಾರರಲ್ಲಿ ಗೊಂದಲ ಸೃಷ್ಟಿ ಮಾಡುವ ಉದ್ದೇಶದಿಂದ ಲಕ್ಷ್ಮೀ ಮ. ಹೆಬ್ಬಾಳ್ಕರ್ ಹೆಸರಿನ ಮಹಿಳೆಯಿಂದ ನಾಮಪತ್ರ ಸಲ್ಲಿಕೆ ಮಾಡಿದ್ದರು. ಸೋಮವಾರ ನಾಮಪತ್ರ ವಾಪಸ್ ಪಡೆಯುವ ದಿನವಾದ್ದರಿಂದ ಇವರು ಉಮೇದುವಾರಿಕೆ ವಾಪಸ್ ಪಡೆದಿದ್ದಾರೆ.
ಆದರೆ ಕೆಲವು ಕಿಡಿಗೇಡಿಗಳು ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಎಂಬುವವರು ನಾಮಪತ್ರ ವಾಪಸ್ ಪಡೆದಿದ್ದಾರೆ ಎಂಬ ಸುಳ್ಳು ಸುದ್ದಿ ಹರಡಿಸಿದ್ದಾರೆ. ಈಗಾಗಲೇ ಕ್ಷೇತ್ರದ ತುಂಬಾ ಭರ್ಜರಿ ಪ್ರಚಾರ ಕೈಗೊಂಡಿರುವ ಇವರು ಗೆಲುವಿನ ವಿಶ್ವಾಸದಲ್ಲಿದ್ದರೆ.