ಈಶ್ವರ ಉಳ್ಳಾಗಡ್ಡಿ ಸೇರಿ ಏಳು ಅಧಿಕಾರಿಗಳು ಹಿರಿಯ ಶ್ರೇಣಿ ವೃಂದಕ್ಕೆ ಮುಂಬಡ್ತಿ
ಬೆಳಗಾವಿ : ಬೆಳಗಾವಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಡಾ. ಈಶ್ವರ ಉಳ್ಳಾಗಡ್ಡಿ ಸೇರಿದಂತೆ ಜಿಲ್ಲೆಯಲ್ಲಿ ಸದ್ಯ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ೭ಜನ ಕಿರಿಯ ಶ್ರೇಣಿಯ ಅಧಿಕಾರಿಗಳಿಗೆ ಹಿರಿಯ ಶ್ರೇಣಿ ವೃಂದಕ್ಕೆ ಮುಂಬಡ್ತಿ ನೀಡಿ ಮಂಗಳವಾರ ಸರ್ಕಾರ ಆದೇಶ ಹೊರಡಿಸಿದೆ.
ಡಿಯುಡಿಸಿ ಯೋಜನಾ ನಿರ್ದೇಶಕ ಡಾ. ಈಶ್ವರ ಉಳ್ಳಾಗಡ್ಡಿ, ಬೆಳಗಾವಿ ಉಪವಿಭಾಗಧಿಕಾರಿ ಬಲರಾಮ ಚವ್ಹಾಣ, ಬುಡಾ ಆಯುಕ್ತ ರಾಜಶೇಖರ ಡಂಬಳ, ಬಿಮ್ಸ್ನ ಮುಖ್ಯ ಆಡಳಿತಾಧಿಕಾರಿ ಪ್ರೀತಂ ನಸಲಾಪೂರೆ, ಬುಡಾದ ವಿಶೇಷ ಭೂಸ್ವಾಧೀನಾಧಿಕಾರಿ ರೇಷ್ಮಾ ಹಾನಗಲ್, ಬೆಳಗಾವಿ ಮಹಾನಗರ ಪಾಲಿಕೆ ಕಂದಾಯ ವಿಭಾಗದ ಉಪ ಆಯುಕ್ತ ಪ್ರಶಾಂತ ಹನಗಂಡಿ ಅವರಿಗೆ ಮುಂಬಡ್ತಿ ನೀಡಿ ಸದ್ಯ ಅದೇ ಹುದ್ದೆಯಲ್ಲಿ ಮುಂದುವರೆಸಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಸೈಯಿದಾ ಆಪ್ರೀನ್ ಭಾನು ಎಸ್ ಬಳ್ಳಾರಿ ಅವರನ್ನು ಬೆಳಗಾವಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ಹುದ್ದೆಗೆ ನಿಯೋಜನೆ ಮಾಡಲಾಗಿದೆ.


