ಸಿಎಂ ರಾಜೀನಾಮೆ ಕೇಳಿದರೆ ಕೊಡಲು ಸಿದ್ಧ : ಸಚಿವ ಈಶ್ವರಪ್ಪ
ಬೆಂಗಳೂರು : ಈ ಮಣ್ಣಿನ ಕಾನೂನು ಹಾಗೂ ಸಂವಿಧಾನದಕ್ಕೆ ತಲೆಬಾಗಿ ಮುಖ್ಯಮಂತ್ರಿ ರಾಜೀನಾಮೆ ಕೇಳಿದರೆ ನಾನು ಕೊಡಲ ಸಿದ್ಧ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಖಾಸಗಿ ಸುದ್ದಿ ವಾಹಿನಿಯಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನಲೆಯಲ್ಲಿ ಉಡುಪಿ ಪೊಲೀಸ್ ಠಾಣೆಯಲ್ಲಿ ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಮುಖ್ಯಮಂತ್ರಿ ರಾಜೀನಾಮೆ ಕೇಳಿದರೆ ಕೊಡಲು ಸಿದ್ಧ ಎಂದು ಹೇಳಿದ್ದಾರೆ. ಖಾಸಗಿ ಸುದ್ದಿ ವಾಹಿನಿಯಲ್ಲಿ ಮಾತನಾಡಿದ ಸಚಿವರು ರಾಜೀನಾಮೆ ಮಾತನಾಡಿದ್ದಾರೆ.
ಪಕ್ಷ ಸಂಘಟನೆ ಹಿನ್ನಲೆಯಲ್ಲಿ ಮೈಸೂರನಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಈಶ್ವರಪ್ಪ ಇಂದು ಸಂಜೆ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿ ಮಾಡಲಿದ್ದಾರೆ.