ಹಿರಿಯೂರಿನಲ್ಲಿ ವಿದ್ಯುತ್ ತಂತಿ ತುಳಿದು ಇಬ್ಬರು ರೈತರ ಸಾವು
ಬೆಳಗಾವಿ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿರಿಯೂರು ಗ್ರಾಮದ ಕಬ್ಬಿನ ಗದ್ದೆಯಲ್ಲಿ ವಿದ್ಯುತ್ ತಂತಿ ತುಳಿದು ಇಬ್ಬರು ರೈತರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಮೃತಪಟ್ಟ ರೈತರನ್ನು ಮಹಾದೇವ ಮೈತ್ರಿ (40), ಸಿದ್ದಪ್ಪ ಚಂದರಗಿ (54) ಎಂದು ಗುರುತಿಸಲಾಗಿದೆ. ಎಂದಿನಂತೆ ಕಬ್ಬಿನ ಗದ್ದೆಯ ಕೆಲಸಕ್ಕೆ ಹೋಗಿದ್ದ ರೈತರು ವಿದ್ಯುತ್ ತಂತಿ ಹರಿದು ಬಿದ್ದಿರುವುದನ್ನು ಗಮನಿಸದೆ ತಂತಿ ತುಳಿದ ಪರಿಣಾಮ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸವದತ್ತಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.