ಬೆಳಗಾವಿ : ವಿವಿಧ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ನಿರ್ಣಾಯಕ ಹಂತ ತಲುಪಿದ್ದು ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ನಡೆದ ಮೊದಲ ಹಂತದ ಸಭೆ ನಂತರ ಈಗ ಮತ್ತೊಮ್ಮೆ ಸಭೆ ಕರೆಯಲು ನಿರ್ಧರಿಸಲಾಗಿದೆ.

ಈಗಾಗಲೇ ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ನಡೆದ ಸಭೆಯಲ್ಲಿ ರೈತ ಮುಖಂಡರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆದರೆ ಕಾರ್ಖಾನೆ ಮಾಲಿಕರ ಜೊತೆಗೆ ಮತ್ತೊಂದು ಸುತ್ತಿನ ಸಭೆ ನಡೆಸಲು ಸಚಿವರು ಮುಂದಾಗಿದ್ದು ಇಂದು ಮಂಗಳವಾರ ರಾತ್ರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಲಿದೆ.

ಸಭೆಯಲ್ಲಿ ಮಾತನಾಡಿದ ರೈತ ಸಂಘಟನೆ ಗೌರವಾಧ್ಯಕ್ಷ ಶಶಿಕಾಂತ ಪಡಸಲಗಿ. ಈಗಾಗಲೇ ಪ್ರತಿ ಟನ್ ಕಬ್ಬಿಗೆ 3,500 ರೂ. ನೀಡಲು ಸಕ್ಕರೆ ಕಾರ್ಖಾನೆಗಳು ಒಪ್ಪಿಕೊಂಡಿದ್ದು ಮುಂದುವರಿದು ಎಷ್ಟು ಕೊಡಲು ಸಾಧ್ಯ ಎಂಬುದನ್ನು ಸ್ಪಷ್ಟಪಡಿಸಿ. ನಮಗೆ ಒಪ್ಪಿಗೆಯಾದರೆ ಹೋರಾಟ ಕೈ ಬಿಡುತ್ತೇವೆ ಎಂದಿದ್ದಾರೆ.‌

ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ 3,700 ವರೆಗೂ ಕೊಡಲು ಹಿಂದೇಟು ಹಾಕುತ್ತಿದ್ದು ಸರ್ಕಾರದ ಒತ್ತಡಕ್ಕೆ ಮಣಿದು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.