Video – ಬಸ್ಸಿನಲ್ಲಿ ಜುಟ್ಟು ಹಿಡಿದು ಹೊಡೆದಾಡಿಕೊಂಡ ಮಹಿಳೆಯರು ; ಶಕ್ತಿ ಪ್ರದರ್ಶನ
ಶಕ್ತಿ ಯೋಜನೆ ಜಾರಿಯಾದಾಗಿನಿಂದ ಬಸ್ಸಿನಲ್ಲಿ ಮಹಿಳೆಯರು ಹೊಡೆದಾಡಿಕೊಳ್ಳುವ ಪ್ರಸಂಗ ಹೆಚ್ಚಾಗತೊಡಗಿದೆ. ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ಒಂದು ವೀಡಿಯೊ ವೈರಲ್ ಆಗಿದ್ದು ಮಹಿಳೆಯರು ಹೊಡೆದಿಕೊಂಡಿದ್ದಾರೆ.
ಹೌದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ ಬಂದಾಗಿನಿಂದ ಮಹಿಳೆಯರು ಬಸ್ಸಿನ ಸೀಟಿಗಾಗಿ ಹೊಡೆದಾಡಿಕೊಳ್ಳುವುದು ಸಾಮಾನ್ಯವಾಗಿದೆ. ಹಾಗೆಯೇ ಸಧ್ಯ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೊ ಒಂದು ವೈರಲ್ ಆಗಿದ್ದು ಇಬ್ಬರು ಮಹಿಳೆಯರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಈಗಾಗಲೇ ಸರ್ಕಾರ ಶಕ್ತಿ ಯೋಜನೆಯಲ್ಲಿ ಕೆಲ ಬದಲಾವಣೆ ತರಲು ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಹಾಗೆಯೇ ಹಬ್ಬದ ಸಂದರ್ಭದಲ್ಲಿ ಮಹಿಳೆಯರು ಪ್ರಯಾಣಿಸುವುದು ಹೆಚ್ಚಾಗಿದ್ದು ಇದರಿಂದ ಸೀಟಿಗಾಗಿ ಪರದಾಟ ಮುಂದುವರಿದಿದೆ.
ಈಗಾಗಲೇ ಮಹಿಳೆಯರಿಗೆ ಉಚಿತ ಪ್ರಯಾಣ ಇದ್ದು ಪುರುಷರು ಹಣ ಕೊಟ್ಟು ಪ್ರಯಾಣಿಸಬೇಕು. ಆದ್ದರಿಂದ ಪುರುಷರು ಸೀಟಿಗಾಗಿ ಪರದಾಟ ನಡೆಸಬೇಕಾಗಿದೆ. ಹಣ ಕೊಟ್ಟರೂ ಸೀಟಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಶಕ್ತಿ ಯೋಜನೆಯಿಂದ ಶಾಲಾ ಮಕ್ಕಳಿಗೂ ಸಂಕಷ್ಟ ಎದುರಾಗಿದೆ ಇದರಿಂದ ಬಸ್ಸಿಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದ್ದು ಎಲ್ಲರಿಗೂ ಸಂಕಷ್ಟ ಎದುರಾಗಿದೆ.