BREAKING ; 5 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ…!

ಗದಗ : ಲಂಚ ಪಡೆಯುವ ವೇಳೆ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಗುತ್ತಿಗೆದಾರನ ಕಡೆಯಿಂದ 5 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ಹಿನ್ನಲೆಯಲ್ಲಿ ಗುತ್ತಿಗೆದಾರನಿಗೆ 11 ಲಕ್ಷ ರೂ. ಗೆ ಬೇಡಿಕೆ ಇಟ್ಟಿದ್ದರು. ಗುತ್ತಿಗೆದಾರ ವಿಜಯ್ ಪೂಜಾರ ಎಂಬುವವರಿಂದ ಹಣ ಪಡೆಯುವ ವೇಳೆ ಲೋಕಾ ಬಲೆಗೆ ಬಿದ್ದಿದ್ದಾರೆ.
ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. ಶಾಸಕ ಹಾಗೂ ಅವರ ಆಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


