ಜಿಬಿಎಸ್ ರೋಗಕ್ಕೆ ಚಿಕ್ಕೋಡಿ ವ್ಯಕ್ತಿ ಸಾವು
ಚಿಕ್ಕೋಡಿ : ಕಳೆದ 2 ತಿಂಗಳ ಅವಧಿಯಲ್ಲಿ ದೇಶದ 5 ರಾಜ್ಯಗಳಲ್ಲಿ 18 ಜನರನ್ನು ಬಲಿ ಪಡೆದಿರುವ ನರಸಂಬಂಧಿ ವ್ಯಾಧಿಯಾದ ಗುಯಿಲಿನ್ ಬರ್ರೆ ಸಿಂಡ್ರೋಮ್ (ಜಿಬಿಎಸ್)ಗೆ ಇದೀಗ ಕರ್ನಾಟಕದ ಮೊದಲ ವ್ಯಕ್ತಿ ಬಲಿಯಾಗಿದ್ದಾರೆ.
ಮಹಾರಾಷ್ಟ್ರದ ಕೊಲ್ಹಾಪುರದ ತ್ರಪತಿ ಪ್ರಿಮಿಲೆರಾಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ದೋನೆವಾಡಿ ಗ್ರಾಮದ ಯೆತಿಲ್ ಬಾಳಗೊಂಡ ಪಾಟೀಲ್ (64) ಶನಿವಾರ ಮೃತಪಟ್ಟಿದ್ದಾರೆ.
ಕಳೆದ ಎಂಟು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಶನಿವಾರ ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದು, ರಾಜ್ಯದಲ್ಲೇ ಜಿಬಿಎಸ್ ಸೋಕಿಂಗೆ ಮೃತಪಟ್ಟ ಮೊದಲ ಘಟನೆ ಇದಾಗಿದೆ.


