
ಪ್ರವಾಸಿಗರಿಗೆ ಸಿಹಿಸುದ್ದಿ ; ಗೋವಾ ಸರ್ಕಾರದಿಂದ ಮಹತ್ವದ ಆದೇಶ

ಬೆಳಗಾವಿ : ಕರ್ನಾಟಕ ರಾಜ್ಯ ಸೇರಿದಂತೆ ವಿವಿಧ ಭಾಗಗಳಿಂದ ಗೋವಾ ರಾಜ್ಯಕ್ಕೆ ಆಗಮಿಸುವ ವಾಹನಗಳಿಗೆ ತಪಾಸಣೆ ನೆಪದಲ್ಲಿ ಅನವಶ್ಯಕ ತೊಂದರೆ ನೀಡದಂತೆ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.
ಗೋವಾಕ್ಕೆ ತೆರಳುವ ಬೆಳಗಾವಿ ಸೇರಿದಂತೆ ರಾಜ್ಯದ ವಾಹನಗಳಿಗೆ ಪೊಲೀಸರು ಅನಗತ್ಯ ತೊಂದರೆ ನೀಡುತ್ತಿರುವುದನ್ನು ತಪ್ಪಿಸುವಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಅನಿಲ್ ಬೆನಕೆ ಜೂನ್16. ರಂದು ಗೋವಾ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು.
ಮಾಜಿ ಶಾಸಕರ ಮನವಿಗೆ ಸ್ಪಂದಿಸಿದ ಗೋವಾ ಸಿಎಂ ಪ್ರಮೋದ್ ಸಾವಂತ್, ಬೆಳಗಾವಿ ಸೇರಿದಂತೆ ದೇಶದ ವಿವಿಧ ರಾಜ್ಯಗಳಿಂದ ಗೋವಾಗೆ ಬರುವ ವಾಹನಗಳಿಗೆ ಪಿಐ ದರ್ಜೆ ಪೊಲೀಸ್ ಅಧಿಕಾರಿಗಳು ಹಗಲಿನ ವೇಳೆ ದಂಡ ಹಾಕುವಂತಿಲ್ಲ. ನಿಯಮ ಉಲ್ಲಂಘನೆ ಮಾಡಿದವರಿಗೆ ಎಂ.ವ್ಹಿ ಚಲನ್ ಹಾಕುವಂತೆ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಗೋವಾ ಸರಕಾರದ ನಿರ್ಧಾರದಿಂದ ಕನ್ನಡಿಗರು ಸೇರಿದಂತೆ ವಿವಿಧ ರಾಜ್ಯಗಳ ಪ್ರವಾಸಿಗರಿಗೆ ಅನುಕೂಲವಾಗಿದೆ. ಇದರಿಂದ ಸಾಮಾನ್ಯ ಜನರೆ ಆಗುತ್ತಿದ್ದ ವಂಚನೆ ತಪ್ಪಿದಂತಾಗಿದೆ. ಈ ನಿರ್ಧಾರದಿಂದ ಗೋವಾಗೆ ಬರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಳವಾಗುತ್ತದೆ ಎಂದು ಮಾಜಿ ಶಾಸಕ ಅನಿಲ್ ಬೆನಕೆ ಪ್ರಮೋದ್ ಸಾವಂತ ಅವರಿಗೆ ಧನ್ಯವಾದ ತಿಳಿಸಿದರು.