VIDEO : ಕನ್ನಡ ಬಾವುಟ ಹಿಡಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಕಾಲೇಜಿಗೂ ಕಾಲಿಟ್ಟ ಭಾಷಾ ವೈಷಮ್ಯ
ಬೆಳಗಾವಿ : ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ ಘಟನೆ ಬೆಳಗಾವಿ ನಗರದಲ್ಲಿ ಬುಧವಾರ ಸಂಜೆ ನಡೆದಿದೆ.
ನಗರದ ಪ್ರತಿಷ್ಠಿತ ಗೋಗಟೆ ಕಾಲೇಜಿನಲ್ಲಿ ಇಂಟರ್ ಕಾಲೇಜ್ ಫೆಸ್ಟ್ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ತಂಡವೊಂದು ಕನ್ನಡ ಬಾವುಟ ಹಿಡಿದು ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇದೆ ಕಾರಣ ಮುಂದಿಟ್ಟುಕೊಂಡ ಸಹಪಾಠಿಗಳಿಂದ ಯುವಕ ಮೇಲೆ ಹಲ್ಲೆ ನಡೆದಿದೆ.
ಇನ್ನೂ ಘಟನೆ ನಡೆಯುತ್ತಿದ್ದಂತೆ ನಗರದ ಕಾನೂನು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಘಟನೆಗೆ ಸಂಬಂಧಿಸಿದಂತೆ ಯುವಕರ ವಿಚಾರಣೆ ಮಾಡುವುದಾಗಿ ತಿಳಿಸಿದ್ದಾರೆ.