ಗೋಕಾಕ್ ಚರಂಡಿಯಲ್ಲಿ ಕೊಚ್ಚಿಹೋದ ವ್ಯಕ್ತಿ ; ಮುಂದುವರಿದ ಶೋಧಕಾರ್ಯ
ಬೆಳಗಾವಿ : ನಿರಂತರವಾಗಿ ಸುರಿದ ಮಳೆಯಿಂದ ತುಂಬಿ ಹರಿಯುತ್ತಿದ್ದ ಚರಂಡಿಗೆ ಕಾಲು ಜಾರಿ ಬಿದ್ದ ವ್ಯಕ್ತಿ ನಾಪತ್ತೆಯಾದ ಘಟನೆ ಗೋಕಾಕ್ ಪಟ್ಟಣದ ಅಬುಲ್ ಕಲಾಮ್ ಕಾಲೇಜು ಬಳಿ ಮಂಗಳವಾರ ಸಂಜೆ ನಡೆದಿದ್ದು, ಶೋಧಕಾರ್ಯ ಮುಂದುವರಿದಿದೆ.
ಕಾಶಪ್ಪ ಶಿರಟ್ಟಿ (52) ಚರಂಡಿಯಲ್ಲಿ ಕೊಚ್ಚಿಹೋದ ವ್ಯಕ್ತಿ ಎಂಬುದು ತಿಳಿದುಬಂದಿದೆ. ಧಾರಾಕಾರ ಸುರಿದ ಮಳೆಯಿಂದ ರಸ್ತೆ ಹಾಗೂ ಚರಂಡಿಗಳು ತುಂಬಿ ಹರಿಯುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಚರಂಡಿ ನೀರಲ್ಲಿ ಕೊಚ್ಚಿ ಹೋಗಿರುವ ವ್ಯಕ್ತಿಯನ್ನು ಎಂದು ಗುರುತಿಸಲಾಗಿದ್ದು ನೀರಲ್ಲಿ ಕಾಶಪ್ಪ ಗೋಕಾಕದ ಗೊಲ್ಲರ ಒಣಿಯ ನಿವಾಸಿ ಎಂದು ತಿಳಿದು ಬಂದಿದೆ. ಕಾಲು ಜಾರಿ ಚರಂಡಿಯಲ್ಲಿ ಬಿದ್ದ ಕಾಶಪ್ಪ ಶಿರಟ್ಟಿಗಾಗಿ ಸಧ್ಯ ಪೊಲಿಸ್ ಇಲಾಖೆ ಮತ್ತು ನಗರಸಭೆ ಸಿಬ್ಬಂದಿಗಳಿಂದ ಹುಡುಕಾಟ ಮುಂದುವರಿದಿದೆ. ಗೋಕಾಕ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

