ರಮೇಶ್ ಜಾರಕಿಹೊಳಿ ಪುತ್ರನಿಂದ ಫೈರಿಂಗ್ ; ಪ್ರಕರಣ ದಾಖಲು – Video
ಗೋಕಾಕ್ : ಪಟ್ಟಣದ ಶ್ರೀ ಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗುತ್ತಿದ್ದು ಈ ವೇಳೆ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಲಕ್ಷಾಂತರ ಜನ ಜಾತ್ರೆಯಲ್ಲಿ ಪಾಲ್ಗೊಂಡ ವೇಳೆ ಶಾಸಕ ರಮೇಶ್ ಜಾರಕಿಹೊಳಿ ಅವರ ಪುತ್ರ ಸಂತೋಷ ಜಾರಕಿಹೊಳಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಕುರಿತು ಗೋಕಾಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತೋಷ್ ಗುಂಡು ಹಾರಿಸಿದ ವೀಡಿಯೋ ಸಧ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಈ ರೀತಿ ಮಾಡುವುದು ಅಪರಾಧ.


