ಬೆಳಗಾವಿ : ವೇಗವಾಗಿ ಬಂದ ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳ ಕ್ರಾಸ್ ಬಳಿ ಈ ನಡೆದಿದೆ.

ಹುಕ್ಕೇರಿ ತಾಲೂಕಿನ ಕೆಎಂ ನಾಗನೂರು ಗ್ರಾಮದ ವಿನಯ ವಿಜಯ ಹಿರೇಮಠ (19), ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಶ್ರವಣ ಗುರುಸಿದ್ದಯ್ಯ ಹಿರೇಮಠ (17) ಮೃತ ಯುವಕರು.

ಅಪಘಾತದ ಬಳಿಕ ಸ್ಥಳದಲ್ಲಿಯೇ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟಪ್ರಭಾ ಪೊಲೀಸರು ಆರೋಪಿ ಚಾಲಕನ್ನನು ವಶಕ್ಕೆ ಪಡೆದಿದ್ದಾರೆ. ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.