VIDEO – ರಮೇಶ್ ಜಾರಕಿಹೊಳಿಗೆ ಅಧ್ಯಕ್ಷರಿಂದ ಬಹುಪರಾಕ್ : ಸಾಹುಕಾರ್ ನೇತೃತ್ವದಲ್ಲಿ ಬೆಳಗಾವಿ ಗೆಲ್ಲುವ ಶಪಥ
ಗೋಕಾಕ್ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ 18 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮೂಲೆಗುಂಪು ಮಾಡುತ್ತೇವೆ ಎಂದು ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳದರು.
ಗೋಕಾಕ್ ನಗರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿ. ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಸಾವಿರಾರು ಕಾರ್ಯಕರ್ತರು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಬರುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಬಿಜೆಪಿ ಬೆಳಗಾವಿ ವಿಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.