ಗೋಕಾಕ್ ತಹಶಿಲ್ದಾರ ಮನೆ ಒಡೆದು ಕಳ್ಳತನ : ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಖದೀಮರು
ಗೋಕಾಕ್ : ತಾಲೂಕಿನ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ಮನೆ ಒಡೆದು ಕಳ್ಳರು ಕೈಚಕ ತೋರಿಸಿದ್ದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳುವಾಗಿದೆ.
ತಾಲೂಕಿನ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿರುವ ತಹಶಿಲ್ದಾರ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಕಳ್ಳತನ ನಡೆದಿದ್ದು ಸುಮಾರು 250 ಗ್ರಾಂ ಚಿನ್ನ, 200 ಗ್ರಾಂ ಬೆಳ್ಳಿ ಹಾಗೂ 4 ಸಾವಿರ ರೂ. ಕಳ್ಳತನ ಮಾಡಿದ್ದಾರೆ.
ಸ್ಥಳಕ್ಕೆ ಗೋಕಾಕ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.