ಎಷ್ಟು ಚಂದ ನೋಡಿ ನಮ್ಮ ಗೋಕಾಕ್ ಜಲಪಾತ!
ಗೋಕಾಕ್ : ಸತತವಾಗಿ ಸುರಿಯುತ್ತಿರುವ ಮಳೆಯಿಂದ ಗೋಕಾಕ ಜಲಪಾತ ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರನ್ನು ಕೈಬಿಸಿ ಕರೆಯುತ್ತಿದೆ.
ಕಳೆದ ಕೆಲ ದಿನಗಳಿಂದ ನಿರಂತರವಾಗಿ ಘಟಪ್ರಭಾ ಜಲಾನಯನ ಪ್ರದೇಶಗಳಲ್ಲಿ ಉತ್ತಮವಾಗಿ ಮಳೆ ಸುರಿಯುತ್ತಿರುವ ಹಿನ್ನಲೆ ಗೋಕಾಕ ಜಲಪಾತ ಮೈದುಂಬಿ ಹರಿಯುತ್ತಿದೆ. ಕಳೆದ ಎರಡು ದಿನಗಳ ರಜೆಯ ಹಿನ್ನಲೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.
ಜಲಪಾತದ ಪಕ್ಕದಲ್ಲಿರುವ ಶ್ರೀ ತಡಸಲ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸುತ್ತಿರುವ ಪ್ರವಾಸಿಗರು ದೇವರ ದರ್ಶನ ಪಡೆದು ಜಲಪಾತದ ಸೋಭಗವನ್ನು ಸವಿಯುತ್ತಿದ್ದಾರೆ.
ರಾಜ್ಯ ಮತ್ತು ಹೊರ ರಾಜ್ಯಗಳಿಂದ ಜಲಪಾತ ನೋಡಲು ಆಗಮಿಸುವ ಪ್ರವಾಸಿಗರ ಸುರಕ್ಷತೆಯ ಕ್ರಮವಾಗಿ ಪೋಲಿಸ್ ಇಲಾಖೆಯಿಂದ ಜಲಪಾತದ ಸುತ್ತಲೂ ಬೇಲಿ ಹಾಕಲಾಗಿದ್ದು, ಜಲಪಾತನ ವೀಕ್ಷಣೆಗೆ ಪ್ರವಾಸಿಗರಿಗೆ ಎರಡು ಬದಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಪ್ರವಾಸಿಗರ ವಾಹನಗಳ ಪಾರ್ಕಿಂಗ್ ಸೇರಿ ಅಗತ್ಯ ಕ್ರಮವನ್ನು ಕೈಗೊಂಡಿರುವ ಪೋಲಿಸ್ ಸಿಬ್ಬಂದಿ ಪ್ರವಾಸಿಗರ ಸುರಕ್ಷತೆಗೆ ಶ್ರಮಿಸುತ್ತಿದ್ದಾರೆ.



