ಖತರ್ನಾಕ್ ಕಳ್ಳನ ಬಂಧಿಸುವಲ್ಲಿ ಗೋಕಾಕ್ ಪೊಲೀಸರು ಯಶಸ್ವಿ
ಗೋಕಾಕ್ : ಮನೆಗಳ್ಳತನ ನಡೆಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಆತನ ಬಳಿ ಇದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಮೊಬೈಲ್ ವಶಪಡಿಸಿಕೊಳ್ಳುವಲ್ಲಿ ಗೋಕಾಕ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿ ಮಹಾದೇವ ಮನವಳ್ಳಿ ( 47 ) ಗೋಕಾಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ. ಬಂಧಿತನಿಂದ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಗೋಕಾಕ್ ಪೊಲೀಸರ ಕಾರ್ಯಕ್ಕೆ ಎಸ್ಪಿ ಡಾ. ಸಂಜೀವ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.