
ಗೃಹಲಕ್ಷ್ಮೀ ಯೋಜನೆ ನಿಲ್ಲುತ್ತಾ…? ಸಿಎಂ ಬಿಗ್ ಅಪ್ಡೇಟ್

ಬೆಂಗಳೂರು : ಕಳೆದ ಮೂರು ತಿಂಗಳ ಅವಧಿಯಿಂದಲೂ ಗೃಹಲಕ್ಷ್ಮೀ ( gruha lakshmi ) ಹಾಗೂ ಅನ್ನಭಾಗ್ಯ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮೆ ಆಗಿಲ್ಲ ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿವೆ.
ಈ ಕುರಿತು ಪ್ರತಿಕ್ರಿಯೆ ನಿಡೀದ ಸಿಎಂ ಸಿದ್ದರಾಮಯ್ಯ. ನಮ್ಮ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆ ಇಲ್ಲ. ಮೂರು ತಿಂಗಳಿನಿಂದ ಹಣ ಬಿಡುಗಡೆ ಆಗದಿರುವುದು ನನ್ನ ಗಮನಕ್ಕೆ ಇಲ್ಲ. ಕೂಡಲೇ ಹಣ ಬಿಡುಗಡೆ ಮಾಡುತ್ತೇವೆ ಎಂದರು.
ಬಜೆಟ್ ಕುರಿತು ಮಹತ್ವದ ಅಪ್ಡೇಟ್ ನೀಡಿದ ಇವರು. ಬರುವ ಮಾರ್ಚ್ 7 ರಂದು ಬಜೆಟ್ ಮಂಡನೆ ಮಾಡಲಾಗುತ್ತದೆ, 03 ರಿಂದ ಅಧಿವೇಶನ ಪ್ರಾರಂಭ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ದಿನಾಂಕ ಘೋಷಣೆ ಮಾಡಿದರು.