ಬೆಂಗಳೂರು: ರಾಜ್ಯ ಸರ್ಕಾರದ (Government )ಐದು ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ (Gruhalakshmi) ಯೋಜನೆಯ ಹಣಕ್ಕಾಗಿ ಕಾಯುತ್ತಿದ್ದ ಲಕ್ಷಾಂತರ ಮಹಿಳೆಯರಿಗೆ ಸಿಹಿ ಸುದ್ದಿ (Good News ) ಸಿಕ್ಕಿದೆ.

ತಾಂತ್ರಿಕ ವಿಳಂಬದಿಂದಾಗಿ ಬಾಕಿಯಿದ್ದ ಮೇ ತಿಂಗಳವರೆಗಿನ ಕಂತುಗಳ ಮೊತ್ತವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು, ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ (DBT) ಮೂಲಕ ಹಣ ಜಮೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ.

ಖಾತೆಗೆ ಹಣವು ಹಂತ ಹಂತವಾಗಿ ಜಮೆಯಾಗುತ್ತಿದ್ದು, ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳ್ಳಲು ಕೆಲ ದಿನಗಳ ಕಾಲಾವಕಾಶ ಬೇಕಾಗಬಹುದು. ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ ಮೊತ್ತ ತಲುಪಿರುವುದನ್ನು ಪರಿಶೀಲಿಸಲು ‘ಕರ್ನಾಟಕ DBT’ ಮೊಬೈಲ್ ಆ್ಯಪ್ ಅಥವಾ ಅಧಿಕೃತ ಸಹಾಯವಾಣಿ ಸಂಖ್ಯೆಗೆ SMS ಕಳುಹಿಸಿ ಖಾತರಿಪಡಿಸಿಕೊಳ್ಳಬಹುದು.

ಒಂದು ವೇಳೆ ಹಣ ಜಮೆಯಾಗದಿದ್ದರೆ, ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಹಾಗೂ NPCI ಮ್ಯಾಪಿಂಗ್ ಸಕ್ರಿಯವಾಗಿದೆಯೇ (Active) ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಗ್ರಾಮ ಒನ್‌, ಕರ್ನಾಟಕ ಒನ್ ಕೇಂದ್ರಗಳು ಅಥವಾ ಸೇವಾ ಸಿಂಧು ವೆಬ್‌ಸೈಟ್ ಸಂಪರ್ಕಿಸಬಹುದು ಎಂದು ಸೂಚನೆ ನೀಡಲಾಗಿದೆ.