BREAKING : ವಿಮಾನ ದುರಂತ , ಸಾವಿನ ಸಂಖ್ಯೆ 110 ಕ್ಕೆ ಏರಿಕೆ
ಅಹಮದಾಬಾದ್ : ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿರುವ ಭೀಕರ ವಿಮಾನ ದುರಂತದಲ್ಲಿ 110 ಜನ ಪ್ರಾಣ ಕಳೆದುಕೊಂಡಿದ್ದು ದೃಢವಾಗಿದೆ.
ಅಹಮದಾಬಾದ್ ನಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ 257 ಜನ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ವಿಮಾನ ನಿಯಂತ್ರಣ ಕಳೆದುಕೊಂಡು ದುರಂತ ಸಂಭವಿಸಿದೆ.
ಅಹಮದಾಬಾದ್ ನಿಂದ ವಿಮಾನ ಹೊರಟ ಕೆಲವೇ ಕ್ಷಣದಲ್ಲಿ ನಿಯಂತ್ರಣ ಕಳೆದುಕೊಂಡು ಬೃಹತ್ ಕಟ್ಟಡಕ್ಕೆ ಡಿಕ್ಕಿ ಹೊಡೆದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಮೃತಪಟ್ಟವರಲ್ಲಿ ಬ್ರಿಟಿಷ್ – 57, ಪೋರ್ಚುಗಲ್ – 05 ಜನ ಇದ್ದರು ಉಳಿದವರು ಭಾರತೀಯ ನಾಗರಿಕರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.


